ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿ ಗಿರೀಶ ವಿರುದ್ಧ ಇನ್ನೊಂದು ಪ್ರಕರಣ ದಾಖಲು

₹3.30 ಲಕ್ಷ ಮೌಲ್ಯದ ಚಿನ್ನಾಭರಣ ₹ 8 ಸಾವಿರ ನಗದು ಪಡೆದು ವಂಚನೆ ಆರೋಪ
Published 18 ಮೇ 2024, 8:04 IST
Last Updated 18 ಮೇ 2024, 8:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ಗಿರೀಶ ಸಾವಂತ ವಿರುದ್ಧ ನಗರದ ಬೆಂಡಿಗೇರಿ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದೆ.

ತನ್ನ ಮಗಳಿಂದ ಆರೋಪಿ ಗಿರೀಶ ₹3.30 ಲಕ್ಷ ಮೌಲ್ಯದ ಚಿನ್ನಾಭರಣ, ₹8 ಸಾವಿರ ಪಡೆದುಕೊಂಡು ವಾಪಸ್ ನೀಡಿಲ್ಲ ಎಂದು ವೀರಾಪುರ ಓಣಿಯ ವಿಜಯಲಕ್ಷ್ಮಿ ಮಡಿವಾಳರ ಎಂಬುವರು ದೂರು ನೀಡಿದ್ದಾರೆ.

ಆರು ತಿಂಗಳ ಹಿಂದೆ ನನ್ನ ಮಗಳು ಟ್ಯೂಷನ್ ಗೆ ಹೋಗುತ್ತಿದ್ದಾಗ ಆತ ಅವಳಿಗೆ ಪರಿಚಯವಾಗಿದ್ದ. ಆಕೆಯೊಂದಿಗೆ ಸಲುಗೆ ಬೆಳೆಸಿದ್ದ ಆತ ತನಗೆ ಹಣದ ಅವಶ್ಯಕತೆ ಇದೆ ಎಂದು ಹೇಳಿ ಆಕೆಯಿಂದ ₹ 8 ಸಾವಿರ ಪಡೆದಿದ್ದ.

ಅದಾದ ನಂತರ ಮತ್ತೆ ₹90 ಸಾವಿರ ಮೌಲ್ಯದ 15 ಗ್ರಾಂ ತೂಕದ ನೆಕ್ಲೆಸ್, ₹60 ಸಾವಿರ ಮೌಲ್ಯದ 2 ಉಂಗುರ, ₹60 ಸಾವಿರ ಮೌಲ್ಯದ 10 ಗ್ರಾಂ‌ ತೂಕದ ಜೀರಾಮಣಿ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಗೋರಮಾಳ ಸರ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಎರಡು ಜುಮಕಿ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಜಪ್ತಾ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಪದಕ ಸೇರಿದಂತೆ ₹3.30 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದಿದ್ದ. ಅದನ್ನು ವಾಪಸ್ ಕೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ. 16 ವರ್ಷದ ನನ್ನ ಮಗಳು ನಮ್ಮ ಮನೆಯಲ್ಲಿದ್ದ ಚಿನ್ನಾಭರಣ, ನಗದನ್ನು ಆತನಿಗೆ ನೀಡಿದ್ದಾಳೆ‌ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT