ಸೋಮವಾರ, ಜನವರಿ 27, 2020
22 °C

ಹುಬ್ಬಳ್ಳಿ: ಎಪಿಎಲ್ ಕ್ರಿಕೆಟ್ ಟೂರ್ನಿಗೆ ಚಾಲನೆ  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಂಟ ಸಮಾಜದಿಂದ ಇಲ್ಲಿನ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ 'ಅಸ್ತ್ರ ಪ್ರೀಮಿಯರ್ ಲೀಗ್' (ಎಪಿಎಲ್)ಎರಡನೇ ಆವೃತ್ತಿಯ ಕ್ರಿಕೆಟ್ ಟೂರ್ನಿಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಮತ್ತು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಚಾಲನೆ ನೀಡಿದರು.

ಎರಡು ದಿನಗಳ ಕಾಲ ನಡೆಯುವ ಹತ್ತು ಒವರ್ಗಳ ಹೊನಲು ಬೆಳಕಿನ ಈ ಟೂರ್ನಿಯಲ್ಲಿ ಏಳು ತಂಡಗಳು ಭಾಗವಹಿಸಿವೆ. ಟೂರ್ನಿಯಲ್ಲಿ  ರಾಜ್ಯ, ಹೊರ ರಾಜ್ಯ ಹಾಗೂ ವಿದೇಶದಲ್ಲಿ ನೆಲೆಸಿರುವ ಬಂಟ ಸಮಾಜದ ಆಟಗಾರರು ಪಾಲ್ಗೊಂಡಿದ್ದಾರೆ. ಪ್ರಥಮ ಬಹುಮಾನ ₹2.5 ಲಕ್ಷ, ದ್ವಿತೀಯ ₹1.25ಲಕ್ಷ ಮೊತ್ತ ಇದೆ. ಹುಬ್ಬಳ್ಳಿ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಸುಕುಮಾರ ಶೆಟ್ಟಿ, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ರಾಜೇಂದ್ರ ಶೆಟ್ಟಿ, ಮಹೇಶ್ ಶೆಟ್ಟಿ, ದಿನೇಶ್ ಶೆಟ್ಟಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು