ಪಿಂಚಣಿ, ವಸತಿಗೆ ಆಗ್ರಹಿಸಿ ಹಮಾಲಿ ಕಾರ್ಮಿಕರ ಒಕ್ಕೂಟ ಪ್ರತಿಭಟನೆ

7

ಪಿಂಚಣಿ, ವಸತಿಗೆ ಆಗ್ರಹಿಸಿ ಹಮಾಲಿ ಕಾರ್ಮಿಕರ ಒಕ್ಕೂಟ ಪ್ರತಿಭಟನೆ

Published:
Updated:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗಹಿಸಿ ಎಪಿಎಂಸಿ ಹಮಾಲ ಕಾರ್ಮಿಕರ ಒಕ್ಕೂಟ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ:  ನಿವೃತ್ತಿ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸ್ವೀಕರಿಸಲಾಗಿದ್ದು, ಈ ಕೂಡಲೇ ವಿತರಣೆ ಮಾಡಬೇಕು. ಶ್ರಮಜೀವಿಗಳಾದ ಹಮಾಲರಿಗೆ ಪಿಂಚಣಿ ನೀಡುವ ಬಗ್ಗೆ ಕಳೆದ ಬಜೆಟ್‌ನಲ್ಲಿ ಮಾಡಿದ ಘೋಷಣೆಯನ್ನು ಜಾರಿಗೊಳಿಸಬೇಕು. 60 ವರ್ಷ ಪೂರೈಸಿದವರಿಗೆ ₹50 ಸಾವಿರ ನಿವೃತ್ತಿ ಪರಿಹಾರ ನೀಡಬೇಕು. ಪ್ರತಿ ವರ್ಷ ಎರಡು ಜೊತೆ ಸಮವಸ್ತ್ರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪದವಿ ಹಾಗೂ ವೃತ್ತಿಪರ ಕೋರ್ಸ್‌ಗೆ ಸೇರುವ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು.ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲು ಇರುವ ಮಾರ್ಗಸೂಚಿಗಳು ಅವೈಜ್ಞಾನಿಕವಾಗಿದ್ದು, ಅವುಗಳನ್ನು ತಿದ್ದುಪಡಿ ಮಾಡಬೇಕು. ಸರ್ಕಾರ ಹಲವಾರು ವಸತಿ ಯೋಜನೆಗಳನ್ನು ಜಾರಿಗೊಳಿಸಿದರೂ ಹಮಾಲರಿಗೆ ಮಾತ್ರ ಮನೆಗಳು ಸಿಕ್ಕಿಲ್ಲ. ಆದ್ದರಿಂದ ಮೊದಲ ಹಂತದಲ್ಲಿ ಒಂದು ಸಾವಿರ ಮನೆಗಳನ್ನು ಮಂಜೂರು ಮಾಡಬೇಕು ಎಂದು ರಾಜ್ಯ ಹಮಾಲಿ ಕಾರ್ಮಿಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ್ ಹೇಳಿದರು.

ಸತತ ಬರಗಾಲದ ಕಾರಣ ಕೆಲಸ ಕಡಿಮೆಯಾಗಿದ್ದು ಕಾರ್ಮಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷ ಬಸವಣ್ಣೆ‍ಪ್ಪ ನೀಲರಗಿ, ಗುಸಿದ್ದಪ್ಪ ಅಂಬಿಗೇರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !