ಬುಧವಾರ, ಜನವರಿ 20, 2021
24 °C

ಹುಬ್ಬಳ್ಳಿಯಲ್ಲಿ ಕೃಷಿ ಕಾಯ್ದೆಗಳ ಪ್ರತಿ ಸುಟ್ಟು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ, ಹುಬ್ಬಳ್ಳಿಯ ಅಮರಗೋಳದ ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಶುಕ್ರವಾರ ಹೊಸ ಕಾಯ್ದೆಗಳ ಪ್ರತಿಗಳನ್ನು ದಹಿಸಿ ಪ್ರತಿಭಟನೆ ನಡೆಸಿದರು.

ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶದ ರೈತ ಸಮೂಹವು ದೆಹಲಿ ಸೇರಿದಂತೆ, ದೇಶದಾದ್ಯಂತೆ ನಡೆಯುತ್ತಿರುವ ಹೋರಾಟ ದಿನೇ ದಿನೇ ತೀವ್ರವಾಗುತ್ತಿದೆ. ರೈತರ ಕೂಗು ಆಲಿಸದ ಸರ್ಕರ ಬಂಡವಾಳಶಾಹಿಗಳ ಪರವಾಗಿರುವ ಕಾಯ್ದೆಗಳಿಗೆ ಅಂಟಿಕೊಂಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾಯ್ದೆಗಳ ವಿರುದ್ಧ ರಾಜ್ಯದಾದ್ಯಂತ ಸಂಘಟಿತ ಕಾರ್ಮಿಕರು ಪ್ರತಿ ಕಾರ್ಖಾನೆಗಳ ಎದುರು ಹಾಗೂ ಬಿಸಿಯೂಟ, ಅಂಗನವಾಡಿ, ಗ್ರಾಮ ಪಂಚಾಯಿತಿ, ಹಮಾಲಿ, ಬೀದಿ ಬದಿ, ಬೀಡಿ, ಕಟ್ಟಡ ನಿರ್ಮಾಣ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಗುತ್ತಿಗೆ ಕಾರ್ಮಿಕರು ತಮ್ಮ ಕೆಲಸದ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ವರ್ಷದ ದಿನವನ್ನು ‘ಕಾರ್ಮಿಕ ಹಕ್ಕುಗಳನ್ನು ಉಳಿಸುತ್ತೇವೆ. ರೈತರ ಬದುಕನ್ನು ರಕ್ಷಿಸುತ್ತೇವೆ. ಕಾರ್ಫೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ’ ಎಂಬ ಪ್ರತಿಜ್ಞೆಯೊಂದಿಗೆ ಸ್ವಾಗತಿಸಲಾಗುತ್ತಿದೆ ಎಂದರು.

ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಒಕ್ಕೂಟದ ಅಧ್ಯಕ್ಷ ಬಸವಣ್ಣೆಪ್ಪ ನೀರಲಗಿ, ಪ್ರಧಾನ ಕಾರ್ಯದರ್ಶಿ ಗುರುಸಿದ್ದಪ್ಪ ಅಂಬಿಗೇರ, ಮುಖಂಡರಾದ ಕರಿಯಪ್ಪ ದಳವಾಯಿ, ಕರಿಯಪ್ಪ ಗಿರಿಸಾಗರ, ಹುಸೇನಸಾಬ ನದಾಫ್, ಕತಾಲಸಾಬ ಮುಲ್ಲಾ, ಮೊಹ್ಮದರಫೀಕ್ ಮುಳಗುಂದ, ಹನಮಮತ ಅಂಬಿಗೇರ, ಗಾಳೆಪ್ಪ ಮುತ್ಯಾಳ ಇದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು