ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಮಾದರಿ ಜಾರಿಗೆ ಹೊರಟ್ಟಿ ಮನವಿ

Last Updated 23 ಏಪ್ರಿಲ್ 2020, 14:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೊರೊನಾ ಸೋಂಕಿತರಿಗೆ ಆಯುರ್ವೇದ ಹಾಗೂ ಹೋಮಿಯೋಪಥಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದರಿಂದ ಕೇರಳದಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿಯೂ ಈ ಮಾದರಿಯನ್ನು ಬಳಸಲು ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಗುರುವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

‘ರಾಜ್ಯದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಸಾಕಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಪುರಾತನ ಕಾಲದ ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆಗಳಿಗೆ ನಮ್ಮ ರಾಜ್ಯದಲ್ಲಿ ಹೆಚ್ಚಿನ ಒತ್ತು ಕೊಡಬೇಕು. ಆರ್ಥಿಕ ಪರಿಸ್ಥಿತಿ ಕುಸಿದಿರುವ ಕಾರಣ ಕೆಲ ಕಾಮಗಾರಿಗಳನ್ನು ಮುಂದೂಡಿ ಅಗತ್ಯವಿರುವ ಕೆಲಸಗಳಿಗೆ ಮಾತ್ರವೇ ಹಣ ಬಿಡುಗಡೆ ಮಾಡಬೇಕು’ ಎಂದು ಕೋರಿದ್ದಾರೆ.

‘ಮಾಸ್ಕ್‌, ಸ್ಯಾನಿಟೈಸರ್‌, ಕೊರೊನಾ ಪರೀಕ್ಷಾ ಕಿಟ್‌ ಇವುಗಳ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂದು ಕೇಂದ್ರ ಜಿಎಸ್‌ಟಿ ಮಂಡಳಿಗೆ ಪತ್ರ ಬರೆಯಬೇಕು. ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿರುವ ಕಾರಣ ನಿಯಮಗಳನ್ನು ಸ್ವಲ್ಪ ಸಡಿಲಿಕೆ ಮಾಡಬೇಕು. ತೀರಾ ಅಗತ್ಯದ ಕಾರ್ಯಗಳಿಗೆ ಮಾತ್ರ ಪರವಾನಗಿ ನೀಡಬೇಕು. ಗ್ರೀನ್‌ ಜೋನ್‌ನಿಂದ ಗ್ರೀನ್‌ ಜೋನ್‌ಗೆ ಪ್ರಯಾಣಿಸಿ ಕೆಲಸ ಮಾಡುವವರಿಗೆ ಅನುಮತಿ ನೀಡಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

‘ಹೊರ ರಾಜ್ಯದಲ್ಲಿರುವ ಕನ್ನಡಿಗರನ್ನು ತವರಿಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಇದು ಸಾಧ್ಯವಾಗದೇ ಇದ್ದರೆ ಅವರು ಇದ್ದಲ್ಲಿಯೇ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT