ಗುರುವಾರ , ಮೇ 26, 2022
23 °C

ಧರ್ಮಸ್ಥಳ ಸಂಸ್ಥೆ ಕಾರ್ಯಕ್ಕೆ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವಲಗುಂದ: ಮಹಿಳೆಯರ ಸಬಲೀಕರಣಕ್ಕಾಗಿ ಸ್ವಯಂ ಉದ್ಯೋಗಕ್ಕೆ ಅನುಕೂಲ ಮಾಡಿಕೊಟ್ಟ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಪುರಸಭೆ ಅಧ್ಯಕ್ಷ ಮಂಜು ಜಾಧವ ಹೇಳಿದರು.

ಶುಕ್ರವಾರ ಇಲ್ಲಿಯ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ಗುಡಿಸಾಗರ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಗುಡಿಸಾಗರ ವಲಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಗುಡಿಸಾಗರ ವಲಯ ಒಕ್ಕೂಟಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನರಗುಂದ ಪತ್ರಿವನ ಮಠದ ಸಿದ್ದವೀರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅತಿಥಿಗಳಾಗಿ ಡಾ.ಎಂ.ಬಿ.ಮುನೇನಕೊಪ್ಪ, ಸುಭಾಸಚಂದ್ರಗೌಡ ಪಾಟೀಲ, ಓಮೊ ಮರಾಠೆ, ಗುಡಿಸಾಗರ ವಲಯ ಅಧಿಕಾರಿ ಸುರೇಶ ಯಲಿಗಾರ, ಪದ್ಮಾವತಿ ಪೂಜಾರ, ಶಿವಪ್ಪ ಗುಡಸಲಮನಿ, ಪ್ರೇಮಾ ನಾಯ್ಕರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು