ಆರ್‌ಎಸ್‌ಎಸ್‌ ಪ್ರಾತ: ಸ್ಮರಣೆಯಲ್ಲಿ ಬಸವಣ್ಣ: ಬೆಲ್ಲದ

ಗುರುವಾರ , ಮೇ 23, 2019
30 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಆರ್‌ಎಸ್‌ಎಸ್‌ ಪ್ರಾತ: ಸ್ಮರಣೆಯಲ್ಲಿ ಬಸವಣ್ಣ: ಬೆಲ್ಲದ

Published:
Updated:

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಕಚೇರಿಯಲ್ಲಿ ಪ್ರತಿನಿತ್ಯ ನಡೆಯುವ ಪ್ರಾತಃ ಸ್ಮರಣೆಯಲ್ಲಿ ಬಸವಣ್ಣನ ಹೆಸರು ಉಲ್ಲೇಖವಾಗುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

‘ಆರ್‌ಎಸ್‌ಎಸ್‌ ಕಚೇರಿಯಲ್ಲಿ ಬಸವಣ್ಣನ ಫೋಟೊ ಹಾಕಿ’ ಎಂಬ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿಗೆ ಹೇಳಿಕೆಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಅವರು, ಚಂದ್ರಗುಪ್ತ ಮೌರ್ಯನಿಂದ ಹಿಡಿದು ಅಂಬೇಡ್ಕರ್‌ ವರೆಗೂ ನಾಡಿನ ಮಹನೀಯರನ್ನು ಸ್ಮರಣೆ ಮಾಡಲಾಗುತ್ತದೆ. ಇದರಲ್ಲಿ ಬಸವಣ್ಣನ ಹೆಸರೂ ಇದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿ, ‘ಎಲ್ಲ ಆರ್‌ಎಸ್‌ಎಸ್‌ ಕಚೇರಿಯಲ್ಲೂ ಬಸವಣ್ಣನ ಫೋಟೊ ಅಳವಡಿಸಲಾಗಿದೆ. ಸ್ವತ ನಾನೇ ನೋಡಿದ್ದೇನೆ’ ಎಂದು ಸಮಜಾಯಿಷಿ ನೀಡಿದರು.

ಶಾಸಕ ಅಮೃತ ದೇಸಾಯಿ, ಆರ್‌ಎಸ್‌ಎಸ್‌ ಬಗ್ಗೆ ಅರಿವಿಲ್ಲದ ವಿನಯ ಕುಲಕರ್ಣಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಒಮ್ಮೆ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ಸಂಘದ ಅಜೆಂಡಾದ ಬಗ್ಗೆ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !