ಧಾರವಾಡ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಪಂಥೀಯರು. ಅವರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೆಲಸ, ಧ್ಯೇಯ, ಇತಿಹಾಸವೇ ಗೊತ್ತಿಲ್ಲ’ ವಿಧಾನಸಣೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂಘದ ಹಿನ್ನೆಲೆ ಕುರಿತು ಅಧ್ಯಯನ ಮಾಡಿ, ನಂತರ ಮಾತನಾಡಲಿ’ ಎಂದರು.

‘ಹುಬ್ಬಳ್ಳಿಯಲ್ಲಿ ಈಚೆಗೆ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಠಾಚಾರ ಉಲ್ಲಂಘನೆಯಾಗಿದೆ. ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ. ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಹಾಕಬಾರದೆಂಬ ತಿಳಿವಳಿಕೆ ಸಚಿವ ಸಂತೋಷ ಲಾಡ್ ಅವರಿಗೆ ಇರಲಿಲ್ಲವೇ? ಈ ಕುರಿತು ಹಕ್ಕುಚ್ಯುತಿ ಸಲ್ಲಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.