ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಶುಕ್ರವಾರ ವ್ಯಾಪಕ ಮಳೆ ಸುರಿದಿದ್ದು, ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಅಬ್ಬರ ಸ್ವಲ್ಪ ಕಡಿಮೆಯಾಗಿದೆ.
ಸದಾಶಿವಗಡ–ಔರಾದ್ ರಾಜ್ಯ ಹೆದ್ದಾರಿ ಅಸ್ನೋಟಿ ಬಳಿ ಜಲಾವೃತವಾಗಿಸಂಚಾರಕ್ಕೆ ಕೆಲಹೊತ್ತು ಅಡಚಣೆಯಾಗಿತ್ತು. ಗೋಕರ್ಣದ ರಥಬೀದಿಯಲ್ಲೂ ನೀರು ತುಂಬಿಕೊಂಡಿತ್ತು. ಹೊನ್ನಾವರ ತಾಲ್ಲೂಕಿನ ಗುಂಡಬಾಳ ನದಿ ಉಕ್ಕೇರುತ್ತಿದ್ದು ಅಕ್ಕಪಕ್ಕದ ಅಡಿಕೆ ತೋಟಗಳಿಗೆ ನೀರು ನುಗ್ಗಿದೆ. ಶಿರಸಿ, ಕುಮಟಾ, ಸಿದ್ದಾಪುರ, ಮುಂಡಗೋಡದಲ್ಲಿ ಮಳೆ ಸಾಧಾರಣವಾಗಿದ್ದರೆ, ಜೋಯಿಡಾದಲ್ಲಿ ಇಳಿಮುಖಗೊಂಡಿದೆ.
ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಮಳೆಯಾಯಿತು. ಘಟಪ್ರಭಾದಲ್ಲಿ ಜೋರಾಗಿತ್ತು.ಎರಡು ದಿನಗಳಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರಿದಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ-ಯಡೂರು ಕೆಳ ಸೇತುವೆ ಜಲಾವೃತಗೊಂಡಿದೆ. ಜನರ ಸಂಚಾರಕ್ಕೆ ಪರ್ಯಾಯ ಸೇತುವೆ ಇದೆ.ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 44,750 ಕ್ಯುಸೆಕ್ ಮತ್ತು ದೂಧ್‌ಗಂಗಾ ನದಿಯಿಂದ 11,649 ಕ್ಯುಸೆಕ್ ಸೇರಿ 56,399 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ.
ಧಾರವಾಡ, ಹುಬ್ಬಳ್ಳಿ, ಬಾಗಲಕೋಟೆ ಹಾಗೂ ವಿಜಯನಗರ ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.