ಭಾನುವಾರ, ಜೂನ್ 26, 2022
21 °C

ಪೊಲೀಸ್‌ ಮೇಲೆ ಹಲ್ಲೆ; ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೋವಿಡ್‌ ಲಾಕ್‌ಡೌನ್‌ ಇರುವ ಕಾರಣ ಅನಗತ್ಯವಾಗಿ ಓಡಾಡುವವರ ಮೇಲೆ ನಿಗಾ ವಹಿಸಲು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ.

ಶನಿವಾರ ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿ ಶ್ರೀಶೈಲ್ ನರಗುಂದ ಹೊಸೂರು ಚೆಕ್‌ ಪೋಸ್ಟ್‌ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಮಾಸ್ಕ್‌ ಧರಿಸದೆ ಕಾರು ಚಲಾಯಿಸಿಕೊಂಡು ಬಂದ ಉತ್ತರ ಪ್ರದೇಶದ ಗೋರಖಪುರದ ಪ್ರಕಾಶ ಸಿಂಗ್ ಎಂಬಾತನನ್ನು ಪ್ರಯಾಣದ ಪರವಾನಗಿ ಬಗ್ಗೆ ವಿಚಾರಿಸಿದಾಗ; ಪ್ರಕಾಶ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ಸ್ಥಳಕ್ಕೆ ಹೆಚ್ಚಿನ ಸಿಬ್ಬಂದಿ ಬಂದು ಆರೋಪಿಯನ್ನು ಕಾರು ಸಮೇತ ಬಂಧಿಸಿದ್ದಾರೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು