ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸುವುದು ನಿಶ್ಚಿತ: ಭಾಸ್ಕರ್ ರಾವ್

Last Updated 21 ಜುಲೈ 2022, 8:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಸ್ವಪ್ರತಿಷ್ಠೆ ರಾಜಕೀಯದಿಂದ ರಾಜ್ಯದ ಜನ ಬೇಸತ್ತಿದ್ದಾರೆ‌. ಇದರಿಂದಾಗಿ, ಪರ್ಯಾಯ ವ್ಯವಸ್ಥೆ ಬಗ್ಗೆ ಜನ ಒಲವು ತೋರುತ್ತಿದ್ದಾರೆ‌. ಹಾಗಾಗಿ, ಆಮ್ ಆದ್ಮಿ ಪಕ್ಷ ಈ ಬಾರಿ ಪಂಜಾಬ್ ಮಾದರಿಯಲ್ಲಿ ಭರ್ಜರಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದರು.

ಇಲ್ಲಿನ ವಿಕಾಸ ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿ ಪಕ್ಷವನ್ನು ಹಳ್ಳಿ ಹಳ್ಳಿಗಳಲ್ಲಿ ಸಂಘಟಿಸಲಾಗುತ್ತಿದೆ. ಯುವ, ಮಹಿಳಾ ಘಟಕ ಸೇರಿದಂತೆ ಹತ್ತು ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಮೂಲಕ ಸಾಮಾನ್ಯ ಜನರಿಗೆ ಜವಾಬ್ದಾರಿ ಅವಕಾಶ ನೀಡಲಾಗುತ್ತಿದೆ ಎಂದರು.

ಇನ್ನೂ ಚುನಾವಣೆಯೇ ಆಗಿಲ್ಲ. ಈಗಾಗಲೇ ಒಂದು ಪಕ್ಷದವರು ನಾನು ಸಿಎಂ ನಾನು ಸಿಎಂ ಎಂದು ಹೊಡೆದಾಡುತ್ತಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಯಾವೊಬ್ಬ ರಾಜಕಾರಣಿಗೂ ದೂರದೃಷ್ಟಿ ಇಲ್ಲ ಎಂದರು.

ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಸ್ಪರ್ಧಿಸುತ್ತೇನೆ. ನಾನು ರಾಜ್ಯದ ವಿವಿಧೆಡೆ ಪೊಲೀಸ್ ಅಧಿಕಾರಿಯಾಗಿ ರಾಜಕಾರಣಿಗಳನ್ನು ಹತ್ತಿರದಿಂದ ನೋಡಿದ್ದೇನೆ. ಈ ವ್ಯವಸ್ಥೆ ಕಿತ್ತೆಸೆಯಲು ಇಲ್ಲಿಗೆ ಬಂದಿದ್ದೇನೆ ಜನ ನಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದರು.

ಪಕ್ಷದ ಜಿಲ್ಲಾ ಅಧ್ಯಕ್ಷ ಅನಂತಕುಮಾರ ಬುಗಡಿ, ಪ್ರಧಾನ ಕಾರ್ಯದರ್ಶಿ ವಿಕಾಸ ಸೊಪ್ಪಿನ ಹಾಗೂ ಜಿಲ್ಲಾ ಸಂಚಾಲಕ ಅರವಿಂದ್ ಎಂ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT