ಏಕಕಾಲಕ್ಕೆ ವಿಧಾನಸಭೆ, ಲೋಕಸಭಾ ಚುನಾವಣೆಗೆ ಯೋಗಕ್ಷೇಮ ಟ್ರಸ್ಟ್ ಆಗ್ರಹ

7

ಏಕಕಾಲಕ್ಕೆ ವಿಧಾನಸಭೆ, ಲೋಕಸಭಾ ಚುನಾವಣೆಗೆ ಯೋಗಕ್ಷೇಮ ಟ್ರಸ್ಟ್ ಆಗ್ರಹ

Published:
Updated:

ಧಾರವಾಡ: ‘ಒಕ್ಕೂಟದ ವ್ಯವಸ್ಥೆಯಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಬೇಕು’ ಎಂದು ಯೋಗಕ್ಷೇಮ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು.

‘ಏಕಕಾಲದಲ್ಲಿ ಚುನಾವಣೆಗಳು ನಡೆಸಲು ಸಂವಿಧಾನ ಹಾಗೂ ಕಾನೂನು ತಿದ್ದುಪಡಿ ಮಾಡಬೇಕು ಇದರಿಂದ ಚುನಾವಣೆ ವೆಚ್ಚ ಕಡಿಮೆ ಆಗಲಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಏಕ ಕಾಲದಲ್ಲಿ ಚುನಾವಣೆಗಳನ್ನು ನಡೆಸಲು ವಿವಿಧ ರಾಜ್ಯದ ಪ್ರಾದೇಶಿಕ ಪಕ್ಷಗಳು ಹಾಗೂ ರಾಷ್ಟ್ರೀಯ ಪಕ್ಷಗಳು ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಪ್ರಜಾಪ್ರಭುತ್ವ ಗಟ್ಟಿಗೆ ಆಡಳಿತ ಮುಖ್ಯ. ಆದರೆ, ಪದೇ ಪದೇ ಚುನಾವಣೆ ನಡೆಸುವುದರಿಂದ ಅಭಿವೃದ್ಧಿ ನಿರೀಕ್ಷೆ ಅಸಾಧ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳ ಆಡಳಿತ ಇರಬೇಕು. ರಾಷ್ಟ್ರೀಯ ಚಿಂತನೆ ಹೊಂದಿರುವ ರಾಷ್ಟ್ರೀಯ ಪಕ್ಷಗಳು ಲೋಕಸಭೆಗೆ ಸ್ಪರ್ಧಿಸಬೇಕು’ ಎಂದರು.

‘ಈ ನಿಟ್ಟಿನಲ್ಲಿ ಯೋಗಕ್ಷೇಮ ಟ್ರಸ್ಟ್ ವತಿಯಿಂದ ಆ.5 ರಂದು ಬೆಳಿಗ್ಗೆ ಆಲೂರು ವೆಂಕಟರಾವ್ ಭವನದಲ್ಲಿ ‘ಏಕ ಕಾಲಕ್ಕೆ ಲೋಕಸಭೆ–ವಿಧಾನಸಭೆ ಚುನಾವಣೆಗಳನ್ನು ನಡೆಸುವ ಸಾಧಕ–ಭಾದಕಗಳು’ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆ ನಿವೃತ್ತ ಕಾರ್ಯದರ್ಶಿ ಜಿ.ಸಿ. ತಲ್ಲೂರ ವಿಷಯವನ್ನು ಪ್ರಸ್ತಾಪಿಸುವರು. ಅತಿಥಿಯಾಗಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಈಶ್ವರ ಭಟ್ ಆಗಮಿಸಲಿದ್ದಾರೆ’ ಎಂದು ಹೇಳಿದರು.

‘ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರೀಯಾ ಸಮಿತಿ ಅಧ್ಯಕ್ಷನಾಗಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯವನ್ನು ಖಂಡಿಸುತ್ತೇನೆ. ಆಡಳಿತ ನಡೆಸುವವರು ರಾಜ್ಯದ ಸರ್ವ ಜನಾಂಗದ ಅಭಿವೃದ್ಧಿ ದೃಷ್ಟಿ ಗಮನ ಹರಿಸಬೇಕು. ರಾಜ್ಯ ವಿಭಜನೆಯಿಂದ ಅಭಿವೃದ್ಧಿ ಅಸಾಧ್ಯ, ಒಂದಾಗಿ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ’ ಎಂದು ಪಶ್ನೆಯೊಂದಕ್ಕೆ ಉತ್ತರಿಸಿದರು.

ವಕೀಲ‌ ಎಸ್.ಎಚ್. ಮಿಟ್ಟಲಕೋಡ,‌ ಮಹೋನ ರಾಮದುರ್ಗ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !