ಭಾನುವಾರ, ಜುಲೈ 25, 2021
26 °C
ನಗರಾಭಿವೃದ್ಧಿ ಸಚಿವರಿಗೆ ಕೈಗಾರಿಕೋದ್ಯಮಿಗಳ ಮನವಿ ಸಲ್ಲಿಕೆ

ಆಸ್ತಿ ಕರ ವಿನಾಯಿತಿ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ರಾಜ್ಯದ ಕೈಗಾರಿಕೋದ್ಯಮಿಗಳ ಮತ್ತು ಎಪಿಎಂಸಿ ವರ್ತಕರ ಆಸ್ತಿಗಳ ಆಸ್ತಿ ತೆರಿಗೆಗೆ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಭರವಸೆ ನೀಡಿದರು.

ಈ ಕುರಿತು ಚರ್ಚಿಸಲು ಗುರುವಾರ ಬೆಂಗಳೂರಿನಲ್ಲಿ ನಡೆದ 30 ಜಿಲ್ಲೆಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹುಬ್ಬಳ್ಳಿ ಅಧ್ಯಕ್ಷ ಮಹೇಂದ್ರ ಲದ್ದಡ, ಇಲ್ಲಿನ ಎಪಿಎಂಸಿಯ ವ್ಯಾಪಾರಸ್ಥರ ಸಂಘದವರು ಮನವಿ ಸಲ್ಲಿಸಿದರು.

2020-21ನೇ ಸಾಲಿನಲ್ಲಿ ಇದ್ದ ಆಸ್ತಿ ಕರದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಿ ಅದನ್ನೇ ಮುಂದುವರಿಸಬೇಕು. ರಿಯಾಯಿತಿಯೊಂದಿಗೆ ಕರ ಪಾವತಿಸುವ ಅವಧಿಯನ್ನು ಜು. 31ರ ಬದಲಾಗಿ ನವೆಂಬರ್‌ 30 ರ ತನಕ ವಿಸ್ತರಿಸಬೇಕು. ಹೊಸ ಆಸ್ತಿಕರ ತಿದ್ದುಪಡಿ ಕಾಯ್ದೆಯನ್ನು ಎರಡು ವರ್ಷಗಳ ಕಾಲ ಮುಂದೂಡಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.

ಮನವಿ ಆಲಿಸಿದ ಸಚಿವರು 15 ದಿನಗಳ ಒಳಗೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ಪ್ರತಿನಿಧಿಗಳು ತಿಳಿಸಿದರು.

ಸಭೆಯಲ್ಲಿ ಸಂಸ್ಥೆ ಉಪಾಧ್ಯಕ್ಷ ವಿನಯ ಜೆ.ಜವಳಿ, ಗೌರವ ಕಾರ್ಯದರ್ಶಿ ಅಶೋಕ ಗಡಾದ, ಮಾಜಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ, ಎಪಿಎಂಸಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಯಕಲಾಸಪುರ, ಉಪಾಧ್ಯಕ್ಷ ಶಂಕರ ನೇಗಿನಹಾಳ, ಗೌರವ ಕಾರ್ಯದರ್ಶಿ ಪ್ರಭುಲಿಂಗಪ್ಪ ಅಂಕಲಕೋಟಿ ಸೇರಿದಂತೆ ಹಲವು ವ್ಯಾಪಾರಿಗಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು