ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವತಿಯ ನಗ್ನ ವಿಡಿಯೊ ಚಿತ್ರೀಕರಿಸಿ ಹಣಕ್ಕಾಗಿ ಬ್ಲಾಕ್ ಮೇಲ್: ಆಟೊ ಚಾಲಕನ ಬಂಧನ

Last Updated 25 ಮಾರ್ಚ್ 2021, 8:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಯುವತಿಯೊಬ್ಬರ ನಗ್ನ ವಿಡಿಯೊ ಚಿತ್ರೀಕರಿಸಿ ₹25 ಲಕ್ಷಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇಲೆ, ಆಟೊ ಚಾಲಕ ಅನಿಲರಾಜ ಡೋಂಗ್ರೆ ಎಂಬಾತನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮನೆಯಲ್ಲಿ ಯುವತಿ ಒಬ್ಬಳೇ ಇದ್ದಾಗ ಮನೆಗೆ ಬಂದಿದ್ದ ಡೋಂಗ್ರೆ ಚಾಕುವಿನಿಂದ ಬೆದರಿಸಿ, ಆಕೆಯನ್ನು ನಗ್ನಗೊಳಿಸಿದ್ದ.

ಆ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುವುದಾಗಿ ಹೇಳಿ ನಾಲ್ಕು ತೊಲೆ ಬಂಗಾರ ದೋಚಿದ್ದ.

ಅಲ್ಲದೆ, ₹25 ಲಕ್ಷ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದ. ಈ ಕುರಿತು ಯುವತಿಯ ತಾಯಿ ದೂರು ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT