ಸೋಮವಾರ, ಸೆಪ್ಟೆಂಬರ್ 20, 2021
21 °C

ಆಟೊ ಚಾಲಕರಿಗೆ ಪರಿಹಾರ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್‌–19 ಹಿನ್ನೆಲೆಯಲ್ಲಿ ನೀಡುತ್ತಿರುವ ₹5,000 ಪರಿಹಾರ ಎಲ್ಲ ಚಾಲಕರಿಗೂ ದೊರೆಯುವಂತಾಗಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ಆಟೊ ರಿಕ್ಷಾ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಸೋಮವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಸ್ವಂತ ರಿಕ್ಷಾ ಇಲ್ಲದೆ, ಬೇರೆಯವರ ಆಟೊದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಎಲ್ಲರಿಗೂ ದೊರೆಯುವಂತಾಗಬೇಕು ಎಂದು ಆಗ್ರಹಿಸಿದರು.

ಬ್ಯಾಂಕ್‌, ಖಾಸಗಿ ಫೈನಾನ್ಸ್‌ಗಳಲ್ಲಿ ಸಾಲ ಪಡೆದು ಆಟೊರಿಕ್ಷಾಗಳನ್ನು ಪಡೆದವರು ಕಂತು ಪಾವತಿಸದಂತಹ ಸ್ಥಿತಿಗೆ ತಲುಪಿದ್ದಾರೆ. ಆದ್ದರಿಂದ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಪೆಟ್ರೋಲ್‌ ಬೆಲೆ ಹೆಚ್ಚಳ ತೀವ್ರವಾಗಿರುವುದರಿಂದ ಆಟೊ ಓಡಿಸುವುದು ಕಷ್ಟವಾಗಿದೆ. ಪರಿಹಾರ ಧನಕ್ಕಾಗಿ ಅರ್ಜಿ ಹಾಕುವಾಗ ಆಟೊರಿಕ್ಷಾ ಆರ್‌ಸಿ ಬುಕ್‌, ಚೆಸ್ಸಿ ನಂಬರ್‌ ಕೇಳುತ್ತಿದ್ದಾರೆ. ಬಾಡಿಗೆ ವಾಹನ ಓಡಿಸುವವರಿಗೆ ಇದರಿಂದ ಸೌಲಭ್ಯ ದೊರೆಯುತ್ತಿಲ್ಲ ಎಂದು ದೂರಿದರು.

ಚಾಲನಾ ಲೈಸನ್ಸ್‌ ಹಾಗೂ ಬ್ಯಾಡ್ಜ್‌ ಹೊಂದಿದ ಎಲ್ಲ ಚಾಲಕರಿಗೂ ಪರಿಹಾರ ಧನ ನೀಡಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ ಶೇಖರಯ್ಯ ಮಠಪತಿ, ಲೋಕೇಶ ಚಿಕ್ಕಮಂಗಳೂರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು