ಸೋಮವಾರ, ಜೂನ್ 14, 2021
25 °C

ಹುಬ್ಬಳ್ಳಿಯ ಅರ್ನಾ ಅಂಗಡಿಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕೋವಿಡ್‌ 19 ಬಂದ ಬಳಿಕ ಬಡವರು ಹಾಗೂ ಶ್ರೀಮಂತರ ಮೇಲೆ ಆದ ಸಾಮಾಜಿಕ ಪರಿಣಾಮಗಳ ಬಗ್ಗೆ ಚಿತ್ರ ಬಿಡಿಸಿದ ವಿಶ್ವೇಶ್ವರ ನಗರದ ಅರ್ನಾ ಅಂಗಡಿ ಅಂತರರಾಷ್ಟ್ರೀಯ ಆನ್‌ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದಿದ್ದಾಳೆ.

9 ವರ್ಷದ ಅರ್ನಾ ನಗರದ ರೋಟರಿ ಪಬ್ಲಿಕ್‌ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದಾಳೆ. ಜುಲೈ 15ರಿಂದ 31ರ ವರೆಗೆ ನಡೆದ ಸ್ಪರ್ಧೆಯಲ್ಲಿ ಭಾರತದಿಂದ ಪಾಲ್ಗೊಂಡಿದ್ದ ಏಕೈಕ ಸ್ಪರ್ಧಿ. ಅರ್ನಾ, ಬಸವರಾಜ ಅಂಗಡಿ ಹಾಗೂ ಸವಿತಾ ದಂಪತಿಯ ಪುತ್ರಿ.‌

‘ಸ್ಪರ್ಧೆಯಲ್ಲಿ ಪಾಕಿಸ್ತಾನ, ಇಂಗ್ಲೆಂಡ್‌, ಮಾರಿಷಸ್‌, ಫಿಲಿಪ್ಪೀನ್ಸ್‌ ಸೇರಿದಂತೆ ಹತ್ತಕ್ಕೂ ಹೆಚ್ಚು ದೇಶಗಳ 110 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇಷ್ಟೊಂದು ದೊಡ್ಡ ಮಟ್ಟದ ಸ್ಪರ್ಧೆಯಲ್ಲಿ ಮಗಳು ಮೊದಲ ಸ್ಥಾನ ಪಡೆದಿದ್ದಕ್ಕೆ ಅತೀವ ಸಂತೋಷವಾಗಿದೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು