ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆತ್ಮಹತ್ಯೆ ತಡೆಗೆ ಜಾಗೃತಿ ಅಗತ್ಯ: ಮನೋವೈದ್ಯ ಡಾ. ಚಂದ್ರಶೇಖರ್

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ: ಮನೋವೈದ್ಯ ಡಾ. ಚಂದ್ರಶೇಖರ್ ಅಭಿಮತ
Published : 10 ಸೆಪ್ಟೆಂಬರ್ 2024, 15:47 IST
Last Updated : 10 ಸೆಪ್ಟೆಂಬರ್ 2024, 15:47 IST
ಫಾಲೋ ಮಾಡಿ
Comments

ಧಾರವಾಡ: ‘ಇತ್ತೀಚಿನ ದಿನಗಳಲ್ಲಿ ಯುವಜನತೆಯ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಈ ಕುರಿತ ಅಂಕಿ– ಅಂಶಗಳನ್ನು ಗಮನಿಸಿದರೆ ಆತಂಕ ಉಂಟಾಗುತ್ತದೆ. ಆತ್ಮಹತ್ಯೆ ತಡೆಗೆ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಮನೋವೈದ್ಯ ಡಾ. ಸಿ.ಆರ್.ಚಂದ್ರಶೇಖರ ಹೇಳಿದರು.

ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಧಾರವಾಡ ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಡಿಮಾನ್ಸ್ ಸಂಭಾಗಣದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಉಪನ್ಯಾಸದಲ್ಲಿ ಅವರು ಮಾತನಾಡಿದರು.

‘ಪಾಲಕರು ತಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಬೇಕು. ಉತ್ತಮ ಮಾರ್ಗದರ್ಶನ ನೀಡಬೇಕು. ಕುಟುಂಬದಲ್ಲಿ ಒಳ್ಳೆಯ ವಾತಾವರಣ ಇರುವಂತೆ ನೋಡಿಕೊಳ್ಳಬೇಕು. ಕೌಟಂಬಿಕ ಸಮಸ್ಯೆ, ಆರೋಗ್ಯ ಸಮಸ್ಯೆ, ಸೋಲು, ಹತಾಶೆ, ಹಣಕಾಸಿನ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣಗಳಾಗಿವೆ’ ಎಂದು ತಿಳಿಸಿದರು.

‘ಕೆಲವರು ತಮಗೆ ಅತಿಯಾದ ಕಷ್ಟಗಳು ಬಂದಾಗ ಆತ್ಮಹತ್ಯೆಗೆ ಪ್ರಯತ್ನಿಸುತ್ತಾರೆ. ಮನೋವೈದ್ಯರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡು ಆತ್ಮಹತ್ಯೆ ಯೋಚನೆಯಿಂದ ಹೊರಬಂದು ಆತ್ಮವಿಶ್ವಾಸದಿಂದ ಬದುಕಿನಲ್ಲಿ ಸಾಧನೆ ಮಾಡಬೇಕು’ ಎಂದು ತಿಳಿಸಿದರು.

ಜಿಮ್ಸ್ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಸೋಮಶೇಖರ ಬಿಜ್ಜಳ, ಡಿಮ್ಹಾನ್ಸ್‌ ನಿರ್ದೇಶಕ ಡಾ. ಅರುಣಕುಮಾರ, ಎಸ್.ವಿ.ವೈ. ಸಂಸ್ಥೆಯ ನಿರ್ವಹಣಾ ಮಂಡಳಿಯ ನಿರ್ದೇಶಕ ಡಾ. ವಿ.ಎಂ.ದೇಶಪಾಂಡೆ, ಡಾ. ರಾಘವೇಂದ್ರ ನಾಯಕ್, ಡಾ.ಆನಂದ ಪಾಂಡುರಂಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT