ಗುರುವಾರ , ಅಕ್ಟೋಬರ್ 1, 2020
21 °C

ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ಹುಬ್ಬಳ್ಳಿಯ ಕೇಶವಕುಂಜದಲ್ಲಿ ಸಡಗರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಮುಹೂರ್ತ ಸಮೀಪಿಸುತ್ತಿದ್ದಂತೆ ನಗರದ ಆರ್ ಎಸ್ಎಸ್ ಕಚೇರಿ ಕೇಶವಕುಂಜದಲ್ಲಿ ಸಡಗರದ ವಾತಾವರಣ ‌ನಿರ್ಮಾಣವಾಗಿತ್ತು.

ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿರಿಸಲು ದಿನಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಂಗಳವಾರ ರಾತ್ರಿಯೇ ಕೇಶವ ಕುಂಜವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬೆಳಿಗ್ಗೆಯಿಂದಲೆ ರಾಮ ನಾಮ ಪಠಣ, ಭಜನೆಗಳು ನಡೆಯುತ್ತಿವೆ. ಸಂಜೆ ಆರು ಗಂಟೆಗೆ ದೀಪೋತ್ಸವ ಜರುಗಲಿದೆ. 

ಬಾಳೆದಿಂಡು, ಭಗವಾಧ್ವಜ, ಬಣ್ಣಬಣ್ಣದ ಹಾಳೆಗಳಿಂದ ಕಚೇರಿಯನ್ನು ಅಲಂಕರಿಸಲಾಗಿದೆ‌. ಬೆಳಿಗ್ಗೆ ಎಂಟು ಗಂಟೆಯಿಂದ ಕಾರ್ಯಕ್ರಮ ಆರಂಭವಾಗಿದ್ದು, ಕೊರೊನಾ ಸೋಂಕಿನ ಭೀತಿ ಇರುವ ಕಾರಣ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಕಚೇರಿಯ ಸಿಬ್ಬಂದಿ ಹಾಗೂ ಕೆಲ ಆರ್ ಎಸ್ಎಸ್ ಪ್ರಮುಖರಷ್ಟೇ ಪಾಲ್ಗೊಂಡಿದ್ದಾರೆ.

ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಭಾಗವಹಿಸಿದ್ದಾರೆ‌.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು