ಮಂಗಳವಾರ, ನವೆಂಬರ್ 19, 2019
23 °C

ಅಯೋಧ್ಯೆ ತೀರ್ಪು ಯಾರ ಗೆಲುವೂ ಅಲ್ಲ, ಸೋಲೂ ಅಲ್ಲ: ಸಚಿವ ಜೋಶಿ

Published:
Updated:

ಹುಬ್ಬಳ್ಳಿ: ಪ್ರಧಾನಿ ಮೋದಿ ಅವರು ಹೇಳಿದಂತೆ ಅಯೋಧ್ಯೆ ತೀರ್ಪು ಯಾರ  ಗೆಲುವೂ ಅಲ್ಲ, ಸೋಲೂ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ತೀರ್ಪನ್ನು ಎಲ್ಲರೂ ಸಮಚಿತ್ತತೆಯಿಂದ ಒಪ್ಪಿಕೊಳ್ಳಬೇಕು. ಆ ಮೂಲಕ ಶಾಂತಿ ಮತ್ತು ಸೌಹಾರ್ದವನ್ನು ಕಾಪಾಡಬೇಕು ಎಂದರು.

ಇದನ್ನೂ ಓದಿ: ಅಯೋಧ್ಯೆ ತೀರ್ಪು: ಸುಪ್ರೀಂ ಕೋರ್ಟ್‌ ಆದೇಶದ ಮುಖ್ಯಾಂಶಗಳು

ಸುಪ್ರೀಂ ತೀರ್ಪನ್ನು ಅನಿವಾರ್ಯತೆಯಿಂದ ಒಪ್ಪಿಕೊಳ್ಳುವುದಷ್ಟೇ ಅಲ್ಲದೆ, ದೇಶದಲ್ಲಿ ಸರ್ವಧರ್ಮ ಸೌಹಾರ್ದದ ಹಿನ್ನೆಲೆಯಲ್ಲಿ ಗೌರವಿಸಬೇಕು.‌ ಆ ಮೂಲಕ ಭಾರತದ ಹಿರಿಮೆಯನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು.

ಪ್ರತಿಕ್ರಿಯಿಸಿ (+)