ಹುಬ್ಬಳ್ಳಿ:ಇಲ್ಲಿನ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯವು ಭಾರತ ಫೋರ್ಜ್ ಲಿಮಿಟೆಡ್ ಅಧ್ಯಕ್ಷ ಬಾಬಾಸಾಹೇಬ್ ಕಲ್ಯಾಣಿ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ವಿ. ಕುಲಪತಿ ಡಾ.ಅಶೋಕ್ ಶೆಟ್ಟರ್, ಮೊದಲ ಬಾರಿಗೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗಾಗಿ ನೀಡಲಾಗುತ್ತಿದ್ದು, ಮೇ 1ರಂದು ಪ್ರದಾನ ಮಾಡಲಾಗುವುದು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.