ಮಂಗಳವಾರ, ಮೇ 17, 2022
27 °C

ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ನಾಯಕ: ಅಶೋಕ್ ಶಿಗ್ಗಾಂವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಂದಗೋಳ: ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‌ ರಾಂ ಸಮಾಜಕ್ಕೆ ನೀಡಿದ ಕೊಡುಗೆಗಳು ಅಪಾರ. ಅವರು ತೋರಿಸಿದ ಮಾರ್ಗದಲ್ಲಿ ನಾವು ನಡೆಯಬೇಕು ಎಂದು ತಹಶೀಲ್ದಾರ್ ಅಶೋಕ್ ಶಿಗ್ಗಾಂವಿ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಗಜೀವನ್ ರಾಂ ಅವರ 115ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಮುಖಂಡ ಎಂ.ಆರ್. ಪಾಟೀಲ್ ಮಾತನಾಡಿದರು. 2020-21ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಸಮಾಜದ ವಿದ್ಯಾರ್ಥಿಗಳಿಗೆ, ಗ್ರಾಮ ಪಂಚಾಯಿತ ಸದಸ್ಯರನ್ನು ಸನ್ಮಾನಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಕೋಕಾಟೆ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ. ಮಹೇಶ ಕುರಿಯವರ, ಸಿಪಿಐ ಎಂ.ಎನ್. ದೇಶನೂರ, ಹನುಮಂತ ಮೇಲಿನಮನಿ, ರವಿಗೌಡ ಪಾಟೀಲ್, ಶಾರದಾ ನಡುವಿನಮನಿ, ಎನ್.ಎಫ್.ರಶ್ಮಿ, ಮುತ್ತುರಾಜ ಮಾದರ ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನಂದಾ ಹುರಳಿ ಸ್ವಾಗತಿಸಿದರು. ಹಾಲೇಶ ದೊಡಮನಿ ಉಪನ್ಯಾಸ ನೀಡಿದರು.

ಜಗಜೀವನ್‌ ರಾಂ ಅವರ ಭಾವಚಿತ್ರ ಮೆರವಣಿಗೆಗೆ ಶಾಸಕಿ ಕುಸುಮಾವತಿ ಶಿವಳ್ಳಿ ಚಾಲನೆ ನೀಡಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು