ಶನಿವಾರ, ಜನವರಿ 23, 2021
28 °C

ಸ್ವಚ್ಛತೆಗೆ ಒತ್ತು ನೀಡಲು ಬಾಜಪೇಯಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ನಿಧಾನವಾಗಿ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಸೂಚಿಸಿದರು.

ಗುರುವಾರ ಅವರು ಹೊಸೂರು ಬಸ್ ನಿಲ್ದಾಣ, ಬಿಆರ್‌ಟಿಎಸ್‌ ಪಾದಚಾರಿ ಮೇಲ್ಸೇತುವೆ, ವಾಣಿವಿಲಾಸ ವೃತ್ತದ ರಸ್ತೆಗೆ ಭೇಟಿ ನೀಡಿದ ಬಳಿಕ ಮಾತನಾಡಿ ‘ಹೊಸೂರು ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ನಗರದ ವಿವಿಧ ಭಾಗಗಳಿಂದ ಸಂಪರ್ಕ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು. ಕುಡಿಯುವ ನೀರು, ಶೌಚಾಲಯ, ಪ್ರಯಾಣಿಕರ ಆಸನಗಳು ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲು ಒತ್ತು ನೀಡಬೇಕು’ ಎಂದರು.

ಉದ್ದೇಶಿತ ರಾಣಿ ಚನ್ನಮ್ಮ ವೃತ್ತದ ಫ್ಲೈ ಓವರ್ ಯೋಜನೆಯಲ್ಲಿ ಅವಶ್ಯವಿರುವ ಮಾರ್ಪಾಡುಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು. ಹೊಸೂರು ಬಸ್ ನಿಲ್ದಾಣದಿಂದ ವಾಣಿ ವಿಲಾಸ ವೃತ್ತದವರೆಗಿನ ರಸ್ತೆ ವಿಸ್ತರಣೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಹಳೇ ಬಸ್‌ ನಿಲ್ದಾಣ ಪುನರ್ ನಿರ್ಮಾಣ ನಡೆಯಲಿದ್ದು, ಈಗ ಅಲ್ಲಿನ ಬಸ್‌ ನಿಲ್ದಾಣದಿಂದ ಸಂಚರಿಸುವ ಬಸ್‌ಗಳನ್ನು ಸ್ಥಳಾಂತರಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ಅಧಿಕಾರಿಗಳಿಗೆ ಸೂಚಿಸಿದರು.

ಬಿಆರ್‌ಟಿಎಸ್‌ ಉಪ ಪ್ರಧಾನ ವ್ಯವಸ್ಥಾಪಕ ಬಸವರಾಜ ಕೆ., ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ, ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು