ಹುಬ್ಬಳ್ಳಿ: ‘ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ಮತ್ತು ಅಪಾಯಕಾರಿ ನೀತಿ ಖಂಡಿಸಿ ಆಗಸ್ಟ್ 16 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಸಿಟಿಜನ್ ಫಾರ್ ಡೆಮಾಕ್ರೆಸಿ (ಸಿಎಫ್ಡಿ) ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಟಿಜನ್ ಫಾರ್ ಡೆಮಾಕ್ರೆಸಿ (ಸಿಎಫ್ಡಿ), ಜನಾಂದೋಲನ ಮಹಾಮೈತ್ರಿ (ಜೆಎಂಎಂ), ನೈಸರ್ಗಿಕ ಸಂಪನ್ಮೂಲ ರಕ್ಷಣೆ ಸಮಿತಿ (ಎನ್ಸಿಪಿಎನ್ಆರ್) ಮತ್ತು ಗಣಿ ಬಾಧಿತ ಪರಿಸರ ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದರು.

ಪ್ರತಿಭಟನೆಯ ಭಾಗವಾಗಿ ಆಗಸ್ಟ್ 1ರಿಂದ ಆಗಸ್ಟ್ 4ರವರೆಗೆ ಬಳ್ಳಾರಿ ಜಿಲ್ಲೆಯ ಗಣಿ ಬಾಧಿತ ಗ್ರಾಮಗಳಲ್ಲಿ ಬೃಹತ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಸೇರಿದಂತೆ ಗಣಿ ಬಾಧಿತ ಜಿಲ್ಲೆಗಳಲ್ಲಿ ಜನರ ಬವಣೆ ನಿವಾರಣೆಗೆ ₹30 ಸಾವಿರ ಕೋಟಿ ಮೀಸಲಿಡಲಾಗಿದ್ದು, ಅದು ಸದ್ಬಳಕೆಯಾಗುತ್ತಿಲ್ಲ ಎಂದು ದೂರಿದರು.

ರಾಜ್ಯದ ಎಲ್ಲಾ ಕಬ್ಬಿಣದ ಅದಿರು ಗಣಿಗಳಲ್ಲಿ ಅದಿರು ಉತ್ಪಾದನಾ ಮಿತಿಯನ್ನು 57 ದಶಲಕ್ಷ ಟನ್ (ಎಂಟಿ)ಗೆ ಹೆಚ್ಚಿಸುತ್ತಿರುವುದು ಖಂಡನೀಯ. ಅಲ್ಲದೆ, ರಾಜ್ಯದಲ್ಲಿ ಹೊಸ ಗಣಿಗಳಿಗೆ ಅನುಮತಿ ನೀಡಬಾರದು ಎಂದರು.

ದೇವನಹಳ್ಳಿಯಲ್ಲಿ ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆ ಮುಂದಾದಾಗ ಆ ಭಾಗದ 13 ಹಳ್ಳಿಗಳ ಜನರು 1198 ದಿನ ನಡೆಸಿದ ಹೋರಾಟಕ್ಕೆ ಸರ್ಕಾರ ಮಣಿದಿದ್ದು, ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿದಿದೆ. ಇದು ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.