ಹುಬ್ಬಳ್ಳಿ: ‘ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎನ್ನುವುದು ಕಾಂಗ್ರೆಸ್ಗೆ ಖಚಿತವಾಗಿದೆ. ಅದಕ್ಕೆ ಮತಪತ್ರದ (ಬ್ಯಾಲೆಟ್) ಮೂಲಕ ಕುತಂತ್ರದಿಂದ ಗೆಲ್ಲಲು ಹವಣಿಸುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.

‘ಮತಪತ್ರಗಳನ್ನು ಬಳಸಿ ಮತ ಚಲಾಯಿಸುವ ವ್ಯವಸ್ಥೆ ಜಾರಿಗೊಳಿಸಲು ಪ್ರಯತ್ನಿಸುತ್ತಿರುವುದು ಮೂರ್ಖತನದ ಪರಮಾವಧಿ. ಈ ಹಿಂದೆ ಮತಪತ್ರಗಳ ಡಬ್ಬಿಗಳು ಕಳವು ಆದ ಹಲವು ಉದಾಹರಣೆಗಳಿವೆ. ಗೂಂಡಾಗಿರಿ ಮಾಡಿ ಗೆಲ್ಲಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದದ್ದು, ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಪ್ರಯತ್ನ ನಡೆಸಿದ್ದಾರೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ರಾಹುಲ್ ಗಾಂಧಿ ಅವರನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಿದರೆ ಕಾಂಗ್ರೆಸ್ ಎಂದಿಗೂ ಉದ್ಧಾರವಾಗಲ್ಲ. ಅದರ ಸೋಲಿಗೆ ಅವರ ಅಸಂಬದ್ಧ ಹೇಳಿಕೆ ಮತ್ತು ಯೋಜನೆಗಳೇ ಕಾರಣ. ಮತ ಯಂತ್ರಗಳು ಸರಿಯಿಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬರುತಿತ್ತು’ ಎಂದು ಅವರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.