ರೈತರಿಗೆ ಸಾಲ ಸಿಗುತ್ತಿಲ್ಲ: ಕುರುಬೂರು ಶಾಂತಕುಮಾರ್

7

ರೈತರಿಗೆ ಸಾಲ ಸಿಗುತ್ತಿಲ್ಲ: ಕುರುಬೂರು ಶಾಂತಕುಮಾರ್

Published:
Updated:

ಹುಬ್ಬಳ್ಳಿ: ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತಿಗೆ ತಪ್ಪಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸರ್ಕಾರ ಅಧಿಕಾರಕ್ಕೆ ಬಂದು ಅರವತ್ತು ದಿನ ಆದರೂ ಸಾಲ ಮನ್ನಾ ಆಗಿಲ್ಲ. ಕೃಷಿ ಪತ್ತಿನ ಸಹಕಾರ ಸಂಘದ ಸಾಲ ಮನ್ನಾ ಮಾಡಲು ಸಂಪುಟ ತೀರ್ಮಾನಿಸಿದೆ.  ರಾಷ್ಟ್ರೀಯ ಬ್ಯಾಂಕ್ ಸಾಲ ಮನ್ನಾ ಮಾಡಲು ಕ್ರಮ ಕೈಗೊಂಡಿಲ್ಲ. ಸದ್ಯ ರೈತರಿಗೆ ಬ್ಯಾಂಕ್‌ಗಳಿಂದ ಸಾಲ ಸಿಗುತ್ತಿಲ್ಲ ಎಂದರು.

ಹಿಂದಿನ ಸರ್ಕಾರ ಕಬ್ಬು ನಿಯಂತ್ರಣ ಕಾಯ್ದೆ ದುರ್ಬಲಗೊಳಿಸಿದ ಪರಿಣಾಮ ರೈತರ 1,500 ಸಾವಿರ ಕೋಟಿ ಬಾಕಿ ಬಂದಿಲ್ಲ. ಈ ಬಗ್ಗೆ ಹೋರಾಟ ಮಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ರೈತರ ಸಮಸ್ಯೆಗಳನ್ನು ‌ಬಗೆಹರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !