ಶುಕ್ರವಾರ, ಮೇ 27, 2022
23 °C

ಬಸಪ್ಪ ವೀರಗಲ್ಲಿಗೆ ಮಾಲಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವಲಗುಂದ: ರಾಷ್ಟ್ರೀಯ ರೈತ ದಿನದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡ ಎನ್.ಎಚ್. ಕೋನರಡ್ಡಿ ನೇತೃತ್ವ
ದಲ್ಲಿ ಗುರುವಾರ ಹುತಾತ್ಮ ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲಾರ್ಪಣೆ ಮಾಡಲಾಯಿತು. ರೈತರಿಗೆ ಎದುರಾಗಿ
ರುವ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ಕೋನರಡ್ಡಿ ಮಾತನಾಡಿ, ‘‌ಮಾಜಿ ಪ್ರಧಾನಿ ಚೌಧರಿ ಚರಣಸಿಂಗ್ ರೈತರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ
ಗಾಗಿ ಅಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿ ಅನ್ನದಾತರಿಗೆ ಪ್ರೋತ್ಸಾಹ ನೀಡಿದ್ದರು. ಆದರೆ ಈಗಿನ ಕೇಂದ್ರ ಸರ್ಕಾರ ರೈತರಿಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ತಂದು ರೈತ ವಿರೋಧಿ ಧೋರಣೆಗೆ ಕಾರಣ
ವಾಯಿತು’ ಎಂದರು.

‘ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಹೋರಾಟ ಮಾಡಿ
ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಿಂದ 2018ರಿಂದ 2021ರ ವರೆಗೆ ಮುಂಗಾರು, ಹಿಂಗಾರು ಬೆಳೆವಿಮೆ ಪರಿಹಾರ ಬಿಡುಗಡೆಯಾಗ
ಲಿಲ್ಲ. ಪ್ರಕೃತಿ ವಿಕೋಪದಿಂದಲೂ ರೈತರಿಗೆ ಸಾಕಷ್ಟು ಹಾನಿಯಾಗಿದ್ದು ಈಗಲಾದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ನೀಡಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು’ ಎಂದು ಆಗ್ರಹಿಸಿದರು.

ಪುರಸಭೆ ಸದಸ್ಯರಾದ ಜೀವನ ಪವಾರ, ಹನಮಂತ ವಾಲೀಕಾರ, ಶಿವಾನಂದ ತಡಸಿ, ಮುಖಂಡರಾದ ನಿಜಗುಣಿ ಗಾಡದ, ವೀರಭದ್ರಗೌಡ ಪಾಟೀಲ, ಆನಂದ ಹವಳಕೋಡ, ಅಬ್ಬು ಕುನ್ನಿಬಾವಿ, ರವಿ ತೋಟದ, ಬಸನಗೌಡ ಪಾಟೀಲ, ಕುಮಾರ ಲಕ್ಕಮ್ಮನವರ, ಅಪ್ಪಣ್ಣ ನದಾಫ, ಹುಚ್ಚಪ್ಪ ಅವರಕೇರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು