ಸೋಮವಾರ, ಮಾರ್ಚ್ 27, 2023
31 °C

ಎಂಇಎಸ್ ಪುಂಡಾಟಿಕೆ ನಿಯಂತ್ರಿಸುವುದು ಗೊತ್ತಿದೆ: ಬಸವರಾಜ ಬೊಮ್ಮಾಯಿ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಎಂಇಎಸ್ ಕಳೆದ ಐವತ್ತು ವರ್ಷಗಳಿಂದ ಪುಂಡಾಟಿಕೆಯಲ್ಲಿ ತೊಡಗಿದೆ. ಅವರ ಪುಂಡಾಟಿಕೆಯನ್ನು ಹೇಗೆ ನಿಯಂತ್ರಿಸಬೇಕು‌ ಎಂಬುದು ಸರ್ಕಾರಕ್ಕೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ಎಂಇಎಸ್ ಪುಂಡಾಟಿಕೆಯನ್ನು‌ ಸರ್ಕಾರ ಹದ್ದುಬಸ್ತಿನಲ್ಲಿಡಲಿದೆ ಎಂದರು.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತು, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಅದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಪೂರ್ಣವಾಗಿ ಅರ್ಥೈಸಿಕೊಂಡು, ನಂತರ ಪ್ರತಿಕ್ರಿಯೆ ನೀಡಬೇಕು. ಆಗ, ಸ್ಥಾನಕ್ಕೆ ಘನತೆ ಇರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ಡಿ. 19ರಿಂದ ಪ್ರಾರಂಭವಾಗುತ್ತಿದೆ. ಅಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಮಸೂದೆ ಸೇರಿದಂತೆ, ಇತರ ಇಲಾಖೆಗಳ ಹಲವು ಮಸೂದೆಗಳನ್ನು ಮಂಡಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು