ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ

Published 23 ಏಪ್ರಿಲ್ 2024, 6:13 IST
Last Updated 23 ಏಪ್ರಿಲ್ 2024, 6:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ನೇಹಾ ಕೊಲೆ ಪ್ರಕರಣದ ತನಿಖೆ ಪ್ರಾಮಾಣಿಕವಾಗಿ ನಡೆಸುವುದು ಅನುಮಾನ. ಹೀಗಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು' ಎಂದು ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನೇಹಾ ತಂದೆ ನಿರಂಜನ‌ ಅವರು ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು ಅಸಹಾಯಕರಾಗುತ್ತಿದ್ದಾರೆ' ಎಂದು ಆರೋಪಿಸಿದರು.

'ಬಿಜೆಪಿಯವರಿಗೆ ಹಿಂದುಗಳ ಕೊಲೆಯಾಗದೆ ಹಬ್ಬ' ಎನ್ನುವ ಸಚಿವ ಸಂತೋಷ ಲಾಡ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, 'ನೇಹಾ ಅವರನ್ನು ಒಂದು ಜಾತಿಗೆ ಸಿಮೀತ, ಮಾಡಬೇಡಿ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ರಕ್ಷಣೆ ಕೊಡಲು ಆಗಿಲ್ಲ, ಅದರಿಂದ ಯುವತಿಯ ಕೊಲೆ ಆಗಿದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ' ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT