ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
ಬಸವರಾಜ ಹೊರಟ್ಟಿ ಅಭಿನಂದನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಅವರು ಸಾನ್ನಿಧ್ಯ ವಹಿಸುವರು. ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಚಿವ ಸಂತೋಷ ಲಾಡ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಸದರಾದ ಜಗದೀಶ ಶೆಟ್ಟರ್ ಬಸವರಾಜ ಬೊಮ್ಮಾಯಿ ಸಚಿವರಾದ ಎಚ್.ಕೆ.ಪಾಟೀಲ ಮಧುಬಂಗಾರಪ್ಪ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ.