ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯರಾಗಿ 45 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿ ಬಳಗದಿಂದ ಡಿ.13ರಂದು ಮಧ್ಯಾಹ್ನ 3 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ (ಕೆಸಿಸಿಐ) ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು, ವಿವಿಧ ಸಂಘ–ಸಂಸ್ಥೆಗಳ ಪ್ರಮುಖರು, ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು. ಅಭಿನಂದನಾ ಸಮಾರಂಭವನ್ನು ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬಸವರಾಜ ಹೊರಟ್ಟಿ ಅವರನ್ನು ಅಲಂಕೃತ ತೆರೆದ ವಾಹನದಲ್ಲಿ ವಿವಿಧ ಕಲಾತಂಡಗಳೊಂದಿಗೆ ಲ್ಯಾಮಿಂಗ್ಟನ್ ಶಾಲೆಯಿಂದ ನೆಹರೂ ಮೈದಾನವರೆಗೆ ಮೆರವಣಿಗೆ ಮಾಡಲು ತೀರ್ಮಾನಿಸಲಾಯಿತು.

ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಂದ ಶಿಕ್ಷಕರು, ಶಾಲಾ– ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ– ಸಂಸ್ಥೆ, ಸಂಘಟನೆಗಳ ಪ್ರಮುಖರು, ಬಸವರಾಜ ಹೊರಟ್ಟಿ ಅವರ ಅಭಿಮಾನಿಗಳನ್ನು ಸಮಾರಂಭಕ್ಕೆ ಕರೆತರಲು ಸುಮಾರು 200 ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದರು.

ಸಭೆಯ ಮಾತನಾಡಿದ ಹು–ಧಾ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ‘ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಚಿವ ಎಚ್.ಕೆ.ಪಾಟೀಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸುವರು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ, ಪ್ರಮುಖರಾದ ಮೋಹನ್ ಲಿಂಬಿಕಾಯಿ, ಲಿಂಗರಾಜ ಪಾಟೀಲ, ದಾನಪ್ಪ ಕಬ್ಬೇರ, ವಿಕಾಸ ಸೊಪ್ಪಿನ್, ಅರವಿಂದ ಕಟಗಿ, ರವಿ ದಂಡಗಿ ಇದ್ದರು.

ಅದ್ದೂರಿ ಸಮಾರಂಭ ಆಯೋಜನೆಗೆ ನಿರ್ಧಾರ ವಿವಿಧ ಪಕ್ಷಗಳ ನಾಯಕರು ಭಾಗವಹಿಸುವ ಸಾಧ್ಯತೆ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲು ತೀರ್ಮಾನ

10 ಸಾವಿರ ಜನ ಸೇರುವ ನಿರೀಕ್ಷೆ

‘ಬಸವರಾಜ ಹೊರಟ್ಟಿ ಪಕ್ಷಾತೀತ ನಾಯಕರಾಗಿದ್ದು ಕಾರ್ಯಕ್ರಮದಲ್ಲಿ 10 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈ ಬಗ್ಗೆ ಎಲ್ಲೆಡೆ ಪ್ರಚಾರ ಕೈಗೊಳ್ಳಬೇಕು’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.