ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್-ಶಾಲು ವಿವಾದ | ​ಸರ್ಕಾರ ಸಭೆ ನಡೆಸಿದರೆ ಮಧ್ಯಸ್ಥಿಕೆಗೆ ಸಿದ್ಧ: ಹೊರಟ್ಟಿ

Last Updated 11 ಫೆಬ್ರುವರಿ 2022, 6:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಸಂಬಂಧ ನಡೆದಿರುವ ವಿವಾದವನ್ನು ಪರಿಹರಿಸಲು ರಾಜ್ಯ ಸರ್ಕಾರ ಸಭೆ ನಡೆಸಿದರೆ ಮಧ್ಯಸ್ಥಿಕೆ ವಹಿಸಲು ಸಿದ್ಧಎಂದು ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಗಿನ ಅಹಿತಕರ ವಾತಾವರಣ ತಿಳಿಗೊಳಿಸಲು ಸರ್ಕಾರ ಪೋಷಕರು, ವಿದ್ಯಾರ್ಥಿಗಳು, ಶೈಕ್ಷಣಿಕ ಸಂಸ್ಥೆಗಳು, ಮುಖ್ಯಮಂತ್ರಿ, ಗೃಹಸಚಿವ ಹಾಗೂ ಶಿಕ್ಷಣ ಸಚಿವರ ಸೌಹಾರ್ದ ಸಭೆ ನಡೆಸಬೇಕು. ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದರು.

ಮೇಲ್ನೋಟಕ್ಕೆ ರಾಜಕೀಯ ಪ್ರೇರಿತ ಎನಿಸುತ್ತಿರುವ ಘಟನೆಗಳನ್ನು ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ‌. ಸಾಕಷ್ಟು ಅಹಿತಕರ ಘಟನೆ ನಡೆದರೂ ಸರ್ಕಾರ ಕೈಕಟ್ಟಿಕೊಂಡು ಕುಳಿತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT