ಸೋಮವಾರ, ಸೆಪ್ಟೆಂಬರ್ 21, 2020
24 °C

ಪ್ರವಾಹ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯ: ಬಸವರಾಜ ಹೊರಟ್ಟಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಿಜೆಪಿ ಸರ್ಕಾರ 2009–10ನೇ ಸಾಲಿನಲ್ಲಿ ಪ್ರವಾಹ ಬಂದಾಗಲೂ ಸರಿಯಾಗಿ ನಿರ್ವಹಿಸಿರಲಿಲ್ಲ. ಈಗಲೂ ಅದೇ ನಿರ್ಲಕ್ಷ್ಯ ಮುಂದುವರೆಸಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಟೀಕಿಸಿದರು.

ಹೊರಟ್ಟಿ ಅವರು ವಿಧಾನ ಪರಿಷತ್‌ ಸದಸ್ಯರಾಗಿ 40 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಬಿದ್ದವರಿಗೆ ಬಹಳ ಕಡಿಮೆ ಪರಿಹಾರ ನೀಡಲಾಗುತ್ತಿದೆ. ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಕೆಲ ಸಚಿವರು ಕ್ವಾರಂಟೈನ್‌ನಲ್ಲಿದ್ದಾರೆ. ಕೆಲವು ಸಚಿವರು ಮಾತ್ರ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸುತ್ತಿದ್ದಾರೆ. ಸಚಿವರೆಲ್ಲರೂ ಒಗ್ಗಟ್ಟಾಗಿ ಪ್ರವಾಹದಿಂದ ಕಷ್ಟಕ್ಕೊಳಗಾದವರಿಗೆ ಸ್ಪಂದಿಸಬೇಕು ಎಂದರು.

ಜೆಡಿಎಸ್‌ ಮುಖಂಡ ಎನ್‌.ಎಚ್‌. ಕೋನರೆಡ್ಡಿ ಮಾತನಾಡಿ, ಕಳೆದ ವರ್ಷ ಪ್ರವಾಹದಿಂದ ಸಂಕಷ್ಟಕ್ಕೊಳಗಾದವರಿಗೆ ಸರಿಯಾಗಿ ಪರಿಹಾರ ದೊರೆತಿಲ್ಲ. ಬೆಳೆ ಹಾನಿಯಾಗಿದೆ. ರಸ್ತೆಗಳೂ ಕಿತ್ತು ಹೋಗಿವೆ. ಸರ್ಕಾರಕ್ಕೆ ನಷ್ಟದ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು