ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಮೂರನೇ ಅಲೆ: ತಜ್ಞರ ಸಮಿತಿ ರಚಿಸಲು ಹೊರಟ್ಟಿ ಆಗ್ರಹ

Last Updated 23 ಮೇ 2021, 14:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್‌ ಮೂರನೇಅಲೆಗೆ ತುತ್ತಾದ ದೇಶಗಳಲ್ಲಿ ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಿದೆ.

ಆದ್ದರಿಂದ ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಮೂರನೆ ಅಲೆಯ ಬಗ್ಗೆ ಅಧ್ಯಯನ ನಡೆಸಲು ವಿಶೇಷ ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ‍ ಅವರಿಗೆ ಪತ್ರ ಬರೆದಿದ್ದಾರೆ.

ಮೂರನೇಅಲೆಯಿಂದ ಮಕ್ಕಳ ಮೇಲೆ ಬೀರಬಹುದಾದ ಪರಿಣಾಮಗಳು ಹಾಗೂ ಇದರ ಬಗ್ಗೆ ಯಾವುದೇ ಹೆಚ್ಚಿನ ಅಧ್ಯಯನ, ವರದಿಗಳು ಲಭ್ಯವಿಲ್ಲದ ಕಾರಣ ಸಮಿತಿ ರಚಿಸುವ ಅಗತ್ಯವಿದೆ. ತಜ್ಞರಿಂದ ಸಂಪೂರ್ಣವಾದ ವರದಿ ಪಡೆದು ಕೈಗೊಳ್ಳಬೇಕಾದ ಅವಶ್ಯಕ ಕ್ರಮಗಳ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.

ನಾಡಿನ ಮಕ್ಕಳ ಹಿತದೃಷ್ಟಿಯಿಂದ ಈ ವಿಷಯವಾಗಿ ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT