ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ, ಎನ್‌ಆರ್‌ಸಿ ಮರುಪರಿಶೀಲನೆಗೆ ಹೊರಟ್ಟಿ ಸಲಹೆ

Last Updated 27 ಜನವರಿ 2020, 10:12 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಿಎಎ, ಎನ್‌ಆರ್‌ಸಿ ಜಾರಿಗೂ ಮುನ್ನಾ ಕೇಂದ್ರ ಸರ್ಕಾರ ಎಲ್ಲರ ವಿಶ್ವಾಸ ಪಡೆದುಕೊಂಡಿದ್ದರೇ ದೇಶದಾದ್ಯಂತ ಇಷ್ಟೊಂದು ದೊಡ್ಡಮಟ್ಟದಲ್ಲಿ ವಿರೋಧ, ಪ್ರತಿಭಟನೆ ನಡೆಯುತ್ತಿರಲಿಲ್ಲ. ದೇಶದಲ್ಲಿ ಅರಾಜಕತೆ ಉಂಟಾಗುವ ಮೊದಲು ಕೇಂದ್ರ ಸರ್ಕಾರ ಮರುಪರಿಶೀಲನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಲಹೆ ನೀಡಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯವಾಗಿ ಕೇಂದ್ರ ಬಜೆಟ್‌ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಯತ್ನಿಸಲಾಗುವುದು ಎಂದು ಹೇಳಿದರು.

ಮಹದಾಯಿ ವಿಷಯದಲ್ಲಿ ಹೊರಟ್ಟಿ ನೇತೃತ್ವದಲ್ಲಿ ರಾಜಕೀಯ ಮುಖಂಡರು ಕಾಲಹರಣ ಮಾಡುತ್ತಿದ್ದಾರೆ. ಬಿಜೆಪಿ ಜೊತೆ ಮಿಲಾಪಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಯಾರೊಂದಿಗೆ ಯಾವುದೇ ಮಿಲಾಪಿ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

‘ಮಹದಾಯಿ ವಿಷಯದಲ್ಲಿ ರಾಜಕಾರಣಿಗಳ ಮೇಲೆ ಅಪವಾದ ಬರಬಾರದು ಎಂಬ ಕಾರಣಕ್ಕೆ ರೈತ ಮುಖಂಡರ ವಿಶ್ವಾಸ ಪಡೆದೇ ಮುಂದಡಿ ಇಡಲಾಗುತ್ತಿದೆ. ಈ ಬಗ್ಗೆ ಅನಗತ್ಯ ಆರೋಪ, ಪ್ರತ್ಯಾರೋಪ ಬೇಡ. ನನ್ನ ನೇತೃತ್ವದ ಬೇಡ ಎಂದಾದರೆ ಬಿಟ್ಟು ಹೋಗುತ್ತೇನೆ. ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT