ಶನಿವಾರ, ಏಪ್ರಿಲ್ 1, 2023
32 °C
ಇಂಧನ ಸಚಿವರಿಗೆ ಬಸವರಾಜ ಹೊರಟ್ಟಿ ಪತ್ರ

ವಿದ್ಯುತ್‌ ಪೋಲು ತಡೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ವಿದ್ಯುತ್‌ ಸಮರ್ಪಕವಾಗಿ ಪೂರೈಕೆಯಾಗದೆ ರೈತರು ಸಂಕಷ್ಟದಲ್ಲಿದ್ದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಗಲಿನಲ್ಲೂ ಬೀದಿ ದೀಪಗಳು ಉರಿಯುತ್ತಿರುವುದರಿಂದ ವಿದ್ಯುತ್‌ ಪೋಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂಧನ ಸಚಿವರಿಗೆ ಪತ್ರ ಬರೆದಿರುವ ಅವರು, ‘ಈಚೆಗೆ ರಾಯಚೂರು, ಮಂತ್ರಾಲಯದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ, ಗಂಗಾವತಿ, ಸಿಂಧನೂರ, ಮಾನವಿ, ಗೋರಕಲ್ ಸೇರಿದಂತೆ ಬಹುತೇಕ ಕಡೆ ಹಗಲಿನಲ್ಲಿಯೂ ಬೀದಿ ದೀಪಗಳು ಉರಿಯುತ್ತಿದ್ದವು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಹಣ ವಿನಿಯೋಗಿಸುತ್ತಿರುವ ಸರ್ಕಾರ, ವಿದ್ಯುತ್‌ ಉಳಿತಾಯದ ಬಗ್ಗೆ ಅರಿವು ಮೂಡಿಸಬೇಕಿದೆ’ ಎಂದು ಮನವಿ ಮಾಡಿದ್ದಾರೆ. 

‘ಹಲವು ಗ್ರಾಮಗಳಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಕೆಯಾಗದೆ ರೈತರು ಪರದಾಡುತ್ತಿದ್ದಾರೆ. ಹೀಗಿರುವಾಗ, ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿದ್ಯುತ್‌ ಪೋಲು ಮಾಡುವುದು ಸರಿಯಲ್ಲ. ಈ ವಿದ್ಯುತ್‌ ಉಳಿತಾಯ ಮಾಡಿದರೆ ಅಗತ್ಯ ಇರುವೆಡೆ ಸಮಪರ್ಕವಾಗಿ ಪೂರೈಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಜಾಗೃತಿ ಮೂಡಿಸಬೇಕು. ವಿದ್ಯುತ್ ಪೋಲಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸಚಿವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು