ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ವಲಸಿಗರ ಸಮೀಕ್ಷೆ ಆರಂಭ

ಐಎಸ್‌ಡಿ ಸೂಚನೆ ಮೇರೆಗೆ ಮಾಹಿತಿ ಸಂಗ್ರಹ
Last Updated 11 ಡಿಸೆಂಬರ್ 2019, 19:24 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಸಮೀಕ್ಷೆ ಕಾರ್ಯ ಬುಧವಾರದಿಂದ ಆರಂಭವಾಗಿದ್ದು, ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಮಾಹಿತಿ ಕಲೆ ಹಾಕಲಾಗುತ್ತಿದೆ.

ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅವಳಿ ನಗರದ 14 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದೆ. ಹುಬ್ಬಳ್ಳಿ– ಧಾರವಾಡ ಪೊಲೀಸ್‌ ಕಮಿಷನರೇಟ್‌ ಸಿಬ್ಬಂದಿ ಮತ್ತು ಗುಪ್ತಚರ ದಳ ಸಿಬ್ಬಂದಿ ಜಂಟಿಯಾಗಿ ಸಮೀಕ್ಷೆ ನಡೆಸುತ್ತಿದ್ದಾರೆ.

‘ಬಾಂಗ್ಲಾದೇಶದಿಂದ ಬಂದ ನುಸುಳುಕೋರರು, ರೋಹಿಂಗ್ಯಾ ಮುಸಲ್ಮಾನರು ಹಾಗೂ ಪಾಕಿಸ್ತಾನ, ಅಫ್ಗಾನಿಸ್ತಾನಗಳಿಂದ ಬಂದ ಅಕ್ರಮ ವಲಸಿಗರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜೊತೆಗೆ, ಬಿಹಾರ ಮತ್ತು ಉತ್ತರ ಪ್ರದೇಶಗಳಿಂದ ಬಂದ ವಲಸಿಗರ ಆಧಾರ ಕಾರ್ಡ್‌ ಮತ್ತು ಭಾವಚಿತ್ರ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಐಎಸ್‌ಡಿ ಸಿಬ್ಬಂದಿಯೊಬ್ಬರು ತಿಳಿಸಿದರು.

ಬುಧವಾರ ಇಲ್ಲಿನ ಘಂಟಿಕೇರಿ, ಸಿಬಿಟಿ ಕಿಲ್ಲಾ, ಯಲ್ಲಾಪುರ ಓಣಿ, ಹಳೇಹುಬ್ಬಳ್ಳಿ, ಚನ್ನಪೇಟೆ, ಕೇಶ್ವಾಪುರ, ಬೆಂಗೇರಿ, ಅಯೋಧ್ಯಾ ನಗರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿರುವ ಪೊಲೀಸರು, 200ಕ್ಕೂ ಹೆಚ್ಚು ಮಂದಿಯ ಮಾಹಿತಿ ಸಂಗ್ರಹಿಸಿದ್ದಾರೆ.

‘ಸರ್ಕಾರದ ಸೂಚನೆ ಮೇರೆಗೆ ಅಕ್ರಮವಾಗಿ ವಾಸವಾಗಿರುವ ವಲಸಿಗರ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಪೊಲೀಸ್‌ ಕಮಿಷನರ್‌ ಆರ್‌. ದಿಲೀಪ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT