ಅಧಿವೇಶನ: ಉ.ಕ. ಅಭಿವೃದ್ಧಿ ಚಿಂತನೆ ನಡೆಯಲಿ

7

ಅಧಿವೇಶನ: ಉ.ಕ. ಅಭಿವೃದ್ಧಿ ಚಿಂತನೆ ನಡೆಯಲಿ

Published:
Updated:

ನವಲಗುಂದ: ಇದೇ 10ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನ ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಕುರಿತು ಹೆಚ್ಚಿನ ಚಿಂತನೆ ನಡೆಸಬೇಕೆಂದು ಬಿಜೆಪಿ ರೈತ ಮೋರ್ಚಾದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ನಾಗನಗೌಡ ಪಾಟೀಲ ಆಗ್ರಹಿಸಿದ್ದಾರೆ.

ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳುತ್ತಾ ಬರುತ್ತಿದ್ದಾರೆಯೇ ಹೊರತು ಕಾರ್ಯರೂಪಕ್ಕೆ ಬರುತ್ತಿಲ್ಲ. ಇದರಿಂದಾಗಿ ಚಾಲ್ತಿ ಇದ್ದ ಸಾಲಗಾರರು ಈಗ ಸುಸ್ತಿ ಸಾಲಗಾರರಾಗಿದ್ದಾರೆ. ಬ್ಯಾಂಕಿನವರಿಗೆ ಸರಿಯಾದ ನಿರ್ದೇಶನ ಇಲ್ಲದ್ದರಿಂದ ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂದರು.

ಕಳಸಾ ಬಂಡೂರಿ, ಮಹದಾಯಿ ನೀರು ಹಂಚಿಕೆ, ಫಸಲ್ ಬಿಮಾ ಯೋಜನೆಯ ಪರಿಹಾರ ಬಾರದಿರುವುದು, ಹೆಸರುಕಾಳು ಖರೀದಿ ಹಣ ಪಾವತಿ ಆಗದಿರುವುದು ಮುಂತಾದ ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು ಎಂದು ನಾಗನಗೌಡ ಪಾಟೀಲ ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !