ಹುಬ್ಬಳ್ಳಿ: ಬೆಂಗಳೂರು –ಮುಂಬೈ ಎಕ್ಸ್ಪ್ರೆಸ್ ದ್ವಿಸಾಪ್ತಾಹಿಕ ರೈಲಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಲ್ಲಿನ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಭಾನುವಾರ ಹಸಿರು ನಿಶಾನೆ ತೋರಿದರು.

ನಂತರ ಮಾತನಾಡಿದ ಅವರು, ‘ಬೆಂಗಳೂರು–ಮುಂಬೈ ನಡುವೆ ರೈಲು ಸೇವೆ ಆರಂಭಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈಗ ಅದು ಈಡೇರಿದೆ. ಈ ರೈಲು ರಾಜ್ಯದ ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ನಿಲುಗಡೆಯಾಗಲಿದೆ’ ಎಂದರು.

‘ಧಾರವಾಡ–ಬೆಳಗಾವಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ₹1 ಸಾವಿರ ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದಿಂದ ಭೂಮಿ ಒದಗಿಸಿದರೆ ಆದಷ್ಟು ಬೇಗ ಕಾಮಗಾರಿ ಆರಂಭವಾಗಲಿದೆ. ತುಮಕೂರು–ದಾವಣಗೆರೆ ನಡುವೆ ಶೇ 75ರಷ್ಟು ಭೂಸ್ವಾಧೀನ ರಾಜ್ಯ ಸರ್ಕಾರದಿಂದ ಆಗಿದೆ. ಈ ಎರಡೂ ಮಾರ್ಗಗಳಲ್ಲಿ ಕಾಮಗಾರಿ ಪೂರ್ಣಗೊಂಡರೆ ಪ್ರಯಾಣ ಅವಧಿಯಲ್ಲಿ ಎರಡೂವರೆ ಗಂಟೆ ಉಳಿಯಲಿದೆ’ ಎಂದು ಹೇಳಿದರು.

‘ಇದು ಸೂಪರ್ಫಾಸ್ಟ್ ರೈಲಾಗಿದ್ದು, ಇದರ ವೇಗವನ್ನು ಹೆಚ್ಚಿಸಲು ಸಹ ಚಿಂತನೆ ನಡೆದಿದೆ. ಈ ಮಾರ್ಗದಲ್ಲಿ ಒಂದು ವರ್ಷದ ಒಳಗೆ ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ಸಲ ಪ್ರಯತ್ನಿಸಲಾಗುವುದು’ ಎಂದರು.

‘ಹುಬ್ಬಳ್ಳಿಯ ರೈಲು ನಿಲ್ದಾಣವನ್ನು ಪುನರ್ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ನೈರುತ್ಯ ರೈಲ್ವೆಯಿಂದ ₹400 ಕೋಟಿ ಮೊತ್ತದ ಪ್ರಸ್ತಾವವನ್ನು ಕಳಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರ ಜತೆ ಮಾತನಾಡಲಾಗುವುದು. ಅಳ್ನಾವರ ರೈಲು ನಿಲ್ದಾಣ ಕಾಮಗಾರಿ ಬಹುತೇಕ ಮುಗಿದಿದ್ದು, ಶೀಘ್ರ ಉದ್ಘಾಟನೆ ಮಾಡಲಾಗುವುದು’ ಎಂದರು.

‘ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಅನುಷ್ಠಾನಕ್ಕೆ ಪ್ರಯತ್ನಿಸಲಾಗುತ್ತಿದೆ. ಈ ಮಾರ್ಗ ಅನುಷ್ಠಾನವಾದರೆ ಅಂಕೋಲಾ, ಬೆಲೆಕೇರಿ ಬಂದರು ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯ’ ಎಂದರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್. ಜಕ್ಕಪ್ಪನವರ, ಪ್ರದೀಪ ಶೆಟ್ಟರ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ರಾಮಪ್ಪ ಬಡಿಗೇರ, ಶಿವು ಮೆಣಸಿನಕಾಯಿ, ಮುಖಂಡರಾದ ಚನ್ನವೀರ ಮುಂಗುರವಾಡಿ, ಮಹೇಂದ್ರ ಸಿಂಘಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-24-1905350240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.