ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಮಗುವಿಗೆ ಉತ್ತಮ ಶಿಕ್ಷಣ: ಸಚಿವ ಪ್ರಲ್ಹಾದ ಜೋಶಿ

Published 9 ಮಾರ್ಚ್ 2024, 16:00 IST
Last Updated 9 ಮಾರ್ಚ್ 2024, 16:00 IST
ಅಕ್ಷರ ಗಾತ್ರ

ನವಲಗುಂದ: ‘ಪ್ರಧಾನಮಂತ್ರಿ ಮೋದಿ ಅವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ದೇಶದ ಪ್ರತಿ ಮಗುವಿಗೆ ಉತ್ತಮ ಶಿಕ್ಷಣವನ್ನು ನೀಡಲು ಇಂತಹ ಯೋಜನೆಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಅಳಗವಾಡಿ ಗ್ರಾಮದ ಸರ್ಕಾರಿ ಮಾದರಿ ಕೇಂದ್ರ ಶಾಲೆಯಲ್ಲಿ ನಿರ್ಮಿಸಲಾದ 5 ಶಾಲಾ ಕೊಠಡಿಗಳ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಲು ಪೂರಕವಾದ ವಾತಾವರಣ ನಿರ್ಮಿಸುವ ಸಲುವಾಗಿ ಕೋಲ್ ಇಂಡಿಯಾ ಲಿಮಿಟೆಡ್ ಸಂಸ್ಥೆಯ ಸಿಎಸ್‌ಆರ್‌ ಯೋಜನೆಯಡಿ ಜಿಲ್ಲೆಯಾದ್ಯಂತ ನೂರಾರು ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದು ಜಿಲ್ಲೆಯಾದ್ಯಂತ ಹಲವಾರು ಶಾಲೆಗಳಿಗೆ ಸ್ಮಾರ್ಟ್‌ಬೋರ್ಡ್‌ಗಳು ಮತ್ತು ಸ್ಮಾರ್ಟ್ ತರಗತಿಗಳ ಸಹಾಯವನ್ನು ನೀಡಲಾಗುತ್ತಿದೆ’ ಎಂದು ಹೇಳಿದರು.

ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, ‘ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಈ ಒಂದು ಉತ್ತರ ಕರ್ನಾಟಕದ ಮಹತ್ವದ ಯೋಜನೆಯಾದ ಮಹದಾಯಿ, ಕಳಸಾ-ಬಂಡೂರಿ ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿದ್ದು, ಇದಕ್ಕೆ ಅಗತ್ಯವಿರುವ ಅನುಮೋದನೆ ಪಡೆಯಲು ಪ್ರಾಧಿಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಜೋಶಿಯವರಲ್ಲಿ ಮನವಿ ಮಾಡಿದರು.

ನವಲಗುಂದ ತಹಶೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗಣ್ಣವವರ, ಕ್ಷೇತ್ರ ಶಿಕ್ಷಣಾಧಿಕಾರಿ  ಶಿವಾನಂದ ಮಲ್ಲಾಡ, ಜಿ.ಪಂ. ಮಾಜಿ ಅಧ್ಯಕ್ಷೆ ಶಾಂತಾದೇವಿ ನೀಡವಣಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಸುತ್ತಗಟ್ಟಿ, ಮಾಜಿ ಶಾಸಕ ಆರ್.ಬಿಶಿರಿಯಣ್ಣನವರ ಪಕ್ಷದ ಮುಖಂಡರಾದ ಬಸವರಾಜ ಕುಂದಗೋಳಮಠ, ಷಣ್ಮುಖ ಗುರಿಕಾರ, ಗಣೇಶ ಹೊಳೆಯನ್ನವರ ಗ್ರಾಮದ ಹಿರಿಯರು, ಪಕ್ಷದ ಪ್ರಮುಖರು ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT