ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಬಿಯಾಂಡ್ ಬೆಂಗಳೂರು ವಾಕಥಾನ್‌ಗೆ ಸಚಿವ ಅಶ್ವತ್ಥ ನಾರಾಯಣ ಚಾಲನೆ

Last Updated 3 ಅಕ್ಟೋಬರ್ 2022, 4:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ನಗರದಲ್ಲಿ ಆಯೋಜಿಸಿರುವ ಎರಡು ದಿನಗಳ ಟೆಕ್ಸಿಲರೇಷನ್–2022 ಅಂಗವಾಗಿ, ಬಿಯಾಂಡ್ ಬೆಂಗಳೂರು– ಹುಬ್ಬಳ್ಳಿ, ಧಾರವಾಡ, ಬೆಳಗಾವಿ 5ಕೆ ವಾಕಥಾನ್‌ಗೆ ಮಾಹಿತಿ ತಂತ್ರಜ್ಞಾನ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಅವರು ಡೆನಿಸನ್ಸ್ ಹೋಟೆಲ್‌ ಬಳಿ ಸೋಮವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, ‘ಮಾಹಿತಿ ತಂತ್ರಜ್ಞಾನವು ಇಂದು ಬೀದಿ ವ್ಯಾಪಾರಿಗಳಿಂದ ಹಿಡಿದು ಪ್ರತಿಯೊಬ್ಬರ ಅವಿಭಾಜ್ಯ ಅಂಗವಾಗಿದೆ. ಐ.ಟಿ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಎಲ್ಲಾ ಕ್ಷೇತ್ರಗಳಲ್ಲೂ ತಂತ್ರಜ್ಞಾನ ಹಾಸು ಹೊಕ್ಕಾಗಿದೆ. ಇನ್ನಷ್ಟು ಪ್ರಚಾರ ಮಾಡುವ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಅಂಗವಾಗಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ಹೋಟೆಲ್‌ನಿಂದ್ ಆರಂಭಗೊಂಡ ವಾಕಥಾನ್‌ ಡಾಲರ್ಸ್ ಕಾಲೊನಿ ಮಾರ್ಗವಾಗಿ ಅಕ್ಷಯ ಕಾಲೊನಿ, ಗೋಕುಲ ರಸ್ತೆಯಲ್ಲಿ ಸಂಚರಿಸಿ ಮತ್ತೆ ಡೆನಿಸನ್ಸ್‌ಗೆ ಮರಳಿ ಮುಕ್ತಾಯಗೊಂಡಿತು. ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ ಗುಪ್ತ, ಅಧಿಕಾರಿಗಳು, ಉದ್ಯಮಿಗಳು ಹಾಗೂ ಸಾರ್ವಜನಿಕರು ವಾಕಥಾನ್‌ನಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT