ಶುಕ್ರವಾರ, ಸೆಪ್ಟೆಂಬರ್ 25, 2020
25 °C

ರಾಮಮಂದಿರಕ್ಕೆ ಭೂಮಿಪೂಜೆ: ಸಡಗರಕ್ಕೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಬುಧವಾರ ಭೂಮಿಪೂಜೆ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿದ್ಧತಾ ಕಾರ್ಯ ಜೋರಾಗಿ ನಡೆದಿವೆ.

ಆರ್‌ಎಸ್‌ಎಸ್‌ ಕಚೇರಿ ಕೇಶವಕುಂಜದಲ್ಲಿ ಭೂಮಿಪೂಜೆಯ ಸಂಭ್ರಮ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳವಾರವೇ ಕಚೇರಿಯನ್ನು ಬಣ್ಣಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಿ ಬಾಳೆದಿಂಡು, ಬಣ್ಣಬಣ್ಣದ ಹಾಳೆಗಳಿಂದ ಶೃಂಗಾರಗೊಳಿಸಲಾಗಿದೆ. ರಾಮ, ಲಕ್ಷ್ಮಣ ಹಾಗೂ ಸೀತೆಯರ ಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸಿ ಅಲಂಕಾರ ಮಾಡಲಾಗಿದೆ.

ಕೇಶವಕುಂಜದಲ್ಲಿ ಬೆಳಿಗ್ಗೆ ಎಂಟು ಗಂಟೆಯಿಂದ ರಾಮನ ಭಜನೆಗಳು ಹಾಗೂ ಪೂಜೆ ನಡೆಯಲಿದ್ದು, ಸಂಜೆ 6 ಗಂಟೆಗೆ ದೀಪೋತ್ಸವ ಜರುಗಲಿದೆ. ಸಂಘದ ಹಿರಿಯ ಪ್ರಚಾರಕ ಸು.ರಾಮಣ್ಣ, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಸೇರಿದಂತೆ ಸಂಘದ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ನಗರದ ಯುವಕ ಮಂಜುನಾಥ ಹೆಬಸೂರ ಹಾಗೂ ಗೆಳೆಯರು ಸೇರಿ ಥರ್ಮಾಕೋಲ್‌ನಲ್ಲಿ ಶ್ರೀರಾಮ ಮಂದಿರದ ಮಾದರಿ ಸಿದ್ಧಪಡಿಸಿದ್ದಾರೆ. ಬಾನಿ ಓಣಿಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು