ಶನಿವಾರ, ಸೆಪ್ಟೆಂಬರ್ 25, 2021
29 °C

ವಿದ್ಯುತ್ ಚಿತಾಗಾರಕ್ಕೆ ಭೂಮಿ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ನಗರದ ವಿದ್ಯಾನಗರ ಸ್ಮಶಾನದಲ್ಲಿ ಕೆನರಾ ಬ್ಯಾಂಕ್‌ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ, ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಸಚಿವರಾದ ಜಗದೀಶ ಶೆಟ್ಟರ್ ಮತ್ತು ಪ್ರಲ್ಹಾದ ಜೋಶಿ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶೆಟ್ಟರ್, ‘₹2 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, ₹11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್‌ಗಳನ್ನು ಒದಗಿಸಲಾಗುತ್ತಿದೆ‌. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆ. 31ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮಂಟೂರಿನ ಸ್ಮಶಾನದಲ್ಲೂ ಸ್ಮಾರ್ಟ್ ಸಿಟಿ ಅನುದಾನದಡಿ ₹2.60‌ ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.

ಜೋಶಿ ಮಾತನಾಡಿ, ‘ಹೆಗ್ಗೇರಿ ಸ್ಮಶಾನದಲ್ಲಿ ₹1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಆನಂದನಗರದಲ್ಲಿ ₹74 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರ ನಿರ್ಮಾಣದ ಟೆಂಡರ್ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಧಾರವಾಡದ ಹೊಸ ಯಲ್ಲಾಪುರ ಸ್ಮಶಾನದಲ್ಲಿ ₹4.40 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರದ ಚೇಂಬರ್ ಅಳವಡಿಸಲಾಗುತ್ತಿದೆ’ ಎಂದು ಹೇಳಿದರು.

ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು