ಅಳ್ನಾವರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ಜನ ಸಾಮಾನ್ಯರು ಬಿಜೆಪಿ
ಆಡಳಿತದಿಂದ ಬಸವಳಿದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಂತೋಷ್ ಲಾಡ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಗುತ್ತಿಗೆದಾರರಿಂದ ಶೇ 40 ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಕೋವಿಡ್ ಕಾಲದಲ್ಲಿ ಎರಡೂವರೆ ಸಾವಿರ ಕೋಟಿ ಹಗರಣ ಮಾಡಿದೆ ಎಂದು ಗಂಭೀರ ಆರೋಪ ಮಾಡಿದರು.

ಪಿಎಸ್‌ಐ ಹುದ್ದೆ ಪಡೆಯಲು ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಬಿಜೆಪಿ ಸಹಾಯ ಮಾಡಿದೆ. ಇದರಿಂದಾಗಿ ಕಷ್ಟಪಟ್ಟು ಓದಿದ ಪ್ರತಿಭಾನ್ವಿತರಿಗೆ ಅನ್ಯಾಯವಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಡಿಜಿಟ್‌ಲ್ ಸದಸ್ಯತ್ವ ಅಭಿಯಾನ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈಗಾಗಲೆ 70 ಲಕ್ಷ ಸದಸ್ಯರನ್ನು ನೋಂದಣಿ ಮಾಡಲಾಗಿದೆ. ಕಲಘಟಗಿ ಕ್ಷೇತ್ರದಲ್ಲಿ 58 ಸಾವಿರ ಟಿಜಿಟಲ್ ಸದಸ್ಯತ್ವ ಮಾಡಲಾಗಿದೆ. ಇನ್ನೂ 20 ಸಾವಿರ ಸದಸ್ಯತ್ವ ಮಾಡುವ ಗುರಿ ಇದೆ ಎಂದರು.

ವಿನಾಯಕ ಕುರುಬರ, ರಮೇಶ ಕುನ್ನೂರಕರ, ಉಸ್ಮಾನ ಬಾತಖಂಡಿ, ಶ್ರೀಕಾಂತ ಗಾಯಕವಾಡ, ಅನ್ವರಖಾನ ಬಾಗೇವಾಡಿ, ಸತ್ತಾರ ಬಾತಖಂಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.