ಶನಿವಾರ, ನವೆಂಬರ್ 28, 2020
17 °C

ಪಶ್ಚಿಮ ಪದವೀಧರರ ಕ್ಷೇತ್ರ: ಬಿಜೆಪಿಯ ಎಸ್.ವಿ.ಸಂಕನೂರಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪ್ರೊ. ಎಸ್.ವಿ.ಸಂಕನೂರ ಅವರು 23,857 ಮತಗಳನ್ನು ಪಡೆದು ಜಯ ಸಾಧಿಸಿದರು.

ಅ. 28ರಂದು ನಡೆದ ಚುನಾವಣೆಯಲ್ಲಿ ಒಟ್ಟು 52068 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಸಂಕನೂರು ಜಯದ ದಡ ಮುಟ್ಟಿದರು.

ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಆರ್.ಎಂ. ಕುಬೇರಪ್ಪ 12448 ಮತಗಳನ್ನು ಪಡೆದರು. ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ 6188 ಮತಗಳನ್ನು ಪಡೆದರು. ಒಟ್ಟು 8772 ಮತಗಳು ತಿರಸ್ಕೃತಗೊಂಡವು.

ಎಸ್‌.ವಿ.ಸಂಕನೂರ ಅವರ ಗೆಲುವನ್ನು ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು