ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಬಗ್ಗೆ ಮಾತನಾಡುವಾಗ ಬಾಯಿ, ನಾಲಿಗೆ ಹಿಡಿತದಲ್ಲಿ ಇರಬೇಕು. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಅಜೆಂಡಾ ನಿಮ್ಮದಾದರೆ, ಅವರನ್ನು ಉಳಿಸುವುದು ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲ ಕಾರ್ಯಕರ್ತರ ಅಜೆಂಡಾ ಆಗಿದೆ.
ಎನ್.ಎಚ್.ಕೋನರೆಡ್ಡಿ, ಶಾಸಕ
ಬ್ಲ್ಯಾಕ್ ಮೇಲರ್ ದೂರು ಪರಿಗಣಿಸಿ ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡಲಾಗಿದೆ. ಕೇಂದ್ರದ ಒತ್ತಡಕ್ಕೆ ಮಣಿದು ನಿಯಮಗಳನ್ನು ಗಾಳಿಗೆ ತೂರಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯಪಾಲರು ನಿರ್ಧಾರವನ್ನು ಮರುಪರಿಶೀಲಿಸಬೇಕು.