ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೇ ರಕ್ಷಣೆಯಿಲ್ಲ: ಸತೀಶ ಜಾರಕಿಹೊಳಿ ಟೀಕೆ

Last Updated 27 ಜುಲೈ 2022, 11:40 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಮಂಗಳೂರಿನ ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತ ಹತ್ಯೆಯಾಗಿದ್ದು, ಅವರದ್ದೇ ಸರ್ಕಾರದಲ್ಲಿ ಅವರಿಗೇ ರಕ್ಷಣೆ ಇಲ್ಲದಂತಾಗಿದೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳಾಗಿವೆ. ಆ ಸಂದರ್ಭಗಳಲ್ಲೆಲ್ಲ ಅವರು ಪ್ರತಿಭಟನೆ ನಡೆಸಿ, ವೋಟ್ ಬ್ಯಾಂಕ್ ಮಾಡಿಕೊಳ್ಳುತ್ತಿದ್ದರು. ಇದೀಗ ಮೌನಕ್ಕೆ ಶರಣಾಗಿದ್ದಾರೆ. ಯಾವುದೇ ಗಲಾಟೆಗೆ ಮುಂದಾಗುತ್ತಿಲ್ಲ, ಅದು ನಮ್ಮ ಪುಣ್ಯ' ಎಂದರು.

'ಬಿಜೆಪಿ ಕಾರ್ಯಕರ್ತ ಪ್ರವೀಣ ಹತ್ಯೆ ಹಿಂದೆ ಬೇರೆ ಬೇರೆ ಕಾರಣ ಇರಬಹುದು. ಏನೇ ಇದ್ದರೂ ತನಿಖೆಯಿಂದ ಅದು ಬಹಿರಂಗವಾಗಬೇಕು. ಪೊಲೀಸರಿಗೆ ಮುಕ್ತವಾಗಿ ತನಿಖೆ ನಡೆಸಲು ಅವಕಾಶ ನೀಡಬೇಕು' ಎಂದು ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT