ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ | ಬಿಜೆಪಿ ಸಭೆ: ಜೋಶಿ, ಶೆಟ್ಟರ್‌, ಮುನೇನಕೊಪ್ಪ ಭಾಗಿ

Published 4 ಫೆಬ್ರುವರಿ 2024, 15:48 IST
Last Updated 4 ಫೆಬ್ರುವರಿ 2024, 15:48 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ ಶನಿವಾರ ರಾತ್ರಿ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು.

ಪಕ್ಷಕ್ಕೆ ಮರು ಸೇರ್ಪಡೆಯಾದ ಜಗದೀಶ ಶೆಟ್ಟರ್‌ ಸೇರಿದಂತೆ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್‌. ಪಾಟೀಲ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ ಚೌಹಾಣ್‌, ವೀರಣ್ಣ ಸವಡಿ ಪಾಲ್ಗೊಂಡಿದ್ದರು. 

ಬೆಳಿಗ್ಗೆ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕಾರಣಿಯಲ್ಲಿ ಶೆಟ್ಟರ್‌ ಹಾಗೂ ಮುನೇನಕೊಪ್ಪ ಅವರು ಭಾಗವಹಿಸಿರಲಿಲ್ಲ. ಅವರು ರಾತ್ರಿ ನಡೆದ ಸಭೆಯಲ್ಲಿ ಭಾಗವಹಿಸಿ, ಲೋಕಸಭಾ ಚುನಾವಣೆಯ ಸಿದ್ಧತೆ ಬಗ್ಗೆ ಚರ್ಚಿಸಿದರು.

‘ಲೋಕಸಭಾ ಚುನಾವಣೆಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು, ಯಾರಿಗೆ ಯಾವ ಜವಾಬ್ದಾರಿ ಹಂಚಿಕೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆಯಾಯಿತು. ರಾತ್ರಿ 9.30ರ ಸುಮಾರಿಗೆ ಸಭೆ ಆರಂಭವಾಗಿ, 45 ನಿಮಿಷಗಳವರೆಗೆ ನಡೆಯಿತು’ ಎಂದು ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT