ಅವಳಿ ನಗರಕ್ಕೆ ತಾರತಮ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

7

ಅವಳಿ ನಗರಕ್ಕೆ ತಾರತಮ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

Published:
Updated:
Deccan Herald

ಹುಬ್ಬಳ್ಳಿ: ಅಭಿವೃದ್ಧಿ ವಿಚಾರದಲ್ಲಿ ರಾಜ್ಯದ ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ತಹಶೀಲ್ದಾರ್‌ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಸಂಸದ ಪ್ರಹ್ಲಾದ ಜೋಶಿ ಅವರು ಕೇಂದ್ರ ರಸ್ತೆ ನಿಧಿಯಡಿ ನೂರಾರು ಕೋಟಿ ಅನುದಾನವನ್ನು ಹುಬ್ಬಳ್ಳಿ–ಧಾರವಾಡ ಅವಳಿ ನಗರಕ್ಕೆ ತಂದಿದ್ದಾರೆ. ಆದರೆ, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿಗೆ ಪೂರಕವಾಗಿ ಟೆಂಡರ್‌ ಕರೆಯುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.

ಹುಬ್ಬಳ್ಳಿ–ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ತಮ್ಮ ಕ್ಷೇತ್ರದ ವಿವಿಧ ಬಡಾವಣೆಗಳಿಗೆ ಅನ್ಯಾಯ ಮಾಡುತ್ತಿದ್ದು, ಸೂಕ್ತ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು.

ಪಾಲಿಕೆಯ ನಿವೃತ್ತ ನೌಕರರಿಗೆ ಬರಬೇಕಿರುವ ಪಿಂಚಣಿ ಹಣವನ್ನು ನೀಡಲು ರಾಜ್ಯ ಸರ್ಕಾರ ಮೀನ–ಮೇಷ ಎಣಿಸುತ್ತಿದೆ. ಇದರಿಂದಾಗಿ ಪಾಲಿಕೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪಕ್ಷದ ಮಹಾನಗರ ಜಿಲ್ಲಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಿವು ಮೆಣಸಿನಕಾಯಿ, ಮುಖಂಡರಾದ ಅಶೋಕ ಕಾಟವೆ, ಪ್ರಭು ನವಲಗುಂದಮಠ, ದೀಪಕ ಮೆಹರವಾಡೆ, ಶಂಕ್ರಪ್ಪ ಚಟ್ಟಿ, ರಾಜು ಜರತಾರಘರ, ಸುವರ್ಣಾ ಜಂಗಮಗೌಡ್ರ, ಸವಿತಾ ಕಟಗಿ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !