ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಬಿಜೆಪಿ ಖಂಡನೆ

Published 28 ಫೆಬ್ರುವರಿ 2024, 16:23 IST
Last Updated 28 ಫೆಬ್ರುವರಿ 2024, 16:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿಧಾನಸೌಧದ ಕಾರಿಡಾರ್‌ನಲ್ಲಿ ಕಿಡಿಗೇಡಿಯೊಬ್ಬ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದನ್ನು ಖಂಡಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಸದಸ್ಯರು ಇಲ್ಲಿನ ಮಿನಿವಿಧಾನಸೌಧದ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯಸಭೆ ಚುನಾವಣಾ ಫಲಿತಾಂಶದ ಸಂಭ್ರಮಾಚರಣೆ ವೇಳೆ ಸೈಯದ್ ನಾಸಿರ್‌ ಹುಸೇನ್‌ ಅವರ ಬೆಂಬಲಿಗನೊಬ್ಬ ಈ ಘೋಷಣೆ ಕೂಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಸೈಯದ್ ನಾಸಿರ್ ಹುಸೇನ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ  ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ‘ಪಾಕಿಸ್ತಾನ ಪರ ಘೋಷಣೆ ಕೂಗುವ ಮೂಲಕ ದೇಶದ ಸಂವಿಧಾನ, ಸಾರ್ವಭೌಮತೆಗೆ ಧಕ್ಕೆ ತರುವ ಕೆಲಸ ಮಾಡಲಾಗಿದೆ’ ಎಂದರು.

ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೂತನ ರಾಜ್ಯಸಭಾ ಸದಸ್ಯ ಸೈಯದ್‌ ನಾಸಿರ್ ಹುಸೇನ್ ಅವರು ರಾಜೀನಾಮೆ ನೀಡಬೇಕು. ಘೋಷಣೆ ಕೂಗಿದ ಕಿಡಿಗೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ತಹಶೀಲ್ದಾರ್‌ ಕಲಗೌಡ ಆರ್‌.ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡ ಅಶೋಕ ಕಾಟವೆ, ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ದತ್ತಮೂರ್ತಿ ಕುಲಕರ್ಣಿ, ರಾಜು ಜರತಾರಘರ, ಉಮೇಶ ಕೌಜಗೇರಿ, ಮಹೇಂದ್ರ ಕೌತಾಳ, ಉಮೇಶ ದೂಶಿ, ಉಮಾ ಮುಕುಂದ, ಮೀನಾಕ್ಷಿ ವಂಟಮೂರಿ ಇದ್ದರು.

ಎಬಿವಿಪಿ ಪ್ರತಿಭಟನೆ

ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್‌ ಹುಸೇನ್‌ ಅವರ ಬೆಂಬಲಿಗನೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಘೋಷಣೆ ಕೂಗಿದ ಕಿಡಿಗೇಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು
ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT