ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ| ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ: ಜೋಶಿ

Published 23 ಮಾರ್ಚ್ 2024, 15:51 IST
Last Updated 23 ಮಾರ್ಚ್ 2024, 15:51 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಕೆಲಸಗಳಾಗಿಲ್ಲ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ವಿರೋಧ ಪಕ್ಷದವರಿಗೂ ಕೂಡ ಸಾಧ್ಯವಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕುಂದಗೋಳ ತಾಲ್ಲೂಕಿನ ಬಿಜೆಪಿ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ತೊಡಗಿರುವ ಕಾಂಗ್ರೆಸ್‌ ಸಹಜವಾಗಿ ನಮ್ಮ ವಿರೋಧಿಸುತ್ತದೆ. ಇದನ್ನು ಬಿಟ್ಟರೆ ಬೇರೆ ಯಾವ ವಿಷಯಗಳೂ ಕಾಂಗ್ರೆಸ್‌ ಬಳಿ ಇಲ್ಲ ಎಂದರು. 

ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಪ್ರತಿಯೊಬ್ಬ ಮತದಾರನ ಮನೆಗೆ ತೆರಳಿ ಪ್ರಚಾರ ನಡೆಸಬೇಕು. ಬೂತ್‌ ಮಟ್ಟದಲ್ಲಿ ಎಲ್ಲ ಜಾತಿ, ವರ್ಗದ ಪ್ರಮುಖರ ಸಭೆ ನಡೆಸಿ, ಅವರಿಗೂ ಮನದಟ್ಟ ಮಾಡಿಕೊಡಬೇಕು ಎಂದು ಹೇಳಿದರು.

ಕುಂದಗೋಳ ಶಾಸಕ ಎಂ.ಆರ್‌. ಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲದಿದ್ದರೂ ಜೋಶಿ ಅವರ ಪ್ರಯತ್ನದಿಂದ ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ’ ಎಂದರು.

ಕುಂದಗೋಳ ವಿಧಾನಸಭಾ ಕ್ಷೇತ್ರದ ಪ್ರಭಾರಿ ಶಶಿವೌಳಿ ಕುಲಕರ್ಣಿ,  ಧಾರವಾಡ ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಲಿಂಗಪ್ಪ ಸುತಗಟ್ಟಿ, ರವಿಗೌಡ ಪಾಟೀಲ, ಮಹಾಂತೇಶ ಶ್ಯಾಗೋಟಿ, ಶಿವಾ ಹಿರೇಗೌಡರ, ಡಿ.ವೈ. ಲಕ್ಕಣ್ಣಗೌಡರ, ಭರಮಪ್ಪ ದ್ಯಾಮನಗೌಡರ, ಯಲ್ಲಮ್ಮ ಗಾಣಿಗೇರ, ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT